ರವಿ ಪಟಗಾರಗೆ ಪಿಡಿಓ ಆಫ್ ದಿ ಮಂತ್ ಪ್ರಶಸ್ತಿ

PDO of the Month Award to Ravi Patagara

ರವಿ ಪಟಗಾರಗೆ ಪಿಡಿಓ ಆಫ್ ದಿ ಮಂತ್ ಪ್ರಶಸ್ತಿ 

ಕಾರವಾರ 13:  ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಗ್ರಾಮೀಣ ಪ್ರದೇಶದ ಜನರ ಸಂಕಷ್ಟಗಳಿಗೆ ಸ್ಪಂದಿಸಿ, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅತ್ಯುತ್ತಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಗುರುತಿಸಿ, ನೀಡಲಾಗುವ ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ನವೆಂಬರ್ ತಿಂಗಳಿಗೆ ಭಾಜನರಾದ ಯಲ್ಲಾಪುರ ತಾಲೂಕಿನ ಕುಂದರಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಪಟಗಾರ ಅವರಿಗೆ ಸೋಮವಾರ ಕುಮಟಾ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಪ್ರಮಾಣ ಪತ್ರ ನೀಡಿ, ಅಭಿನಂದಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಯೋಜನಾ ನಿರ್ದೇಶಕ ಕರೀಂ ಅಸಾದಿ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ್, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ, ಕುಮಟಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಭಟ್ ಸೇರಿದಂತೆ ಇತರರು ಉಪಸ್ಥಿತರಿದ್ದರು.