16ರಂದು ಪಿಡಿಓ, ಅಂಗನವಾಡಿ ಮೇಲ್ವಿಚಾರಕರಿಗೆ ಕಾಯರ್ಾಗಾರ: ತೊರವಿ
ಕೊಪ್ಪಳ 06: ಬಾಲ್ಯ ವಿವಾಹ ಹಾಗೂ ಬಾಲ ಕಾಮರ್ಿಕತೆಯ ದುಷ್ಪರಿಣಾಮಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಕುರಿತು ಎಲ್ಲಾ ಗ್ರಾ.ಪಂ. ಪಿಡಿಓ, ಅಂಗನವಾಡಿ ಮೇಲ್ವಿಚಾರಕಿಯರಿಗೆ ಮತ್ತು ಸಮೂಹ ಸಂಪನ್ಮೂಲ ಅಧಿಕಾರಿಗಳಿಗೆ ಒಂದು ದಿನದ ಕಾಯರ್ಾಗಾರವನ್ನು ಜ. 16 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಆಯೋಜಿಸಲಾಗಿದೆ ಎಂದು ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ. ವನಿತಾ ತೊರವಿ ಅವರು ಹೇಳಿದರು.
ಬಾಲ್ಯ ವಿವಾಹ ಹಾಗೂ ಬಾಲ ಕಾಮರ್ಿಕತೆಯ ದುಷ್ಪರಿಣಾಮಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಬಗ್ಗೆ ಗ್ರಾ.ಪಂ. ಪಿಡಿಓ, ಅಂಗನವಾಡಿ ಮೇಲ್ವಿಚಾರಕಿಯರಿಗೆ ಮತ್ತು ಸಮೂಹ ಸಂಪನ್ಮೂಲ ಅಧಿಕಾರಿಗಳಿಗೆ ಒಂದು ದಿನದ ಕಾಯರ್ಾಗಾರವನ್ನು ಆಯೋಜಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಛೇರಿಯಲ್ಲಿ ಶನಿವಾರದಂದು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯ 8, 9 ಹಾಗೂ 10ನೇ ತರಗತಿಯ ಮತ್ತು ಪ್ರಥಮ ಪಿಯುಸಿ ವಿದ್ಯಾಥರ್ಿಗಳಿಗೆ ಜ. 16 ರಿಂದ 30 ರವರೆಗೆ "ಸಂದಿಗ್ಧ" ಚಲನಚಿತ್ರ ಪ್ರದರ್ಶನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಗ್ರಾ.ಪಂ. ಪಿಡಿಓ, ಅಂಗನವಾಡಿ ಮೇಲ್ವಿಚಾರಕಿಯರಿಗೆ ಮತ್ತು ಸಮೂಹ ಸಂಪನ್ಮೂಲ ಅಧಿಕಾರಿಗಳಿಗೆ ಒಂದು ದಿನದ ಕಾಯರ್ಾಗಾರವನ್ನು ಸಹ ಹಮ್ಮಿಕೊಳ್ಳಲಾಗಿದೆ.
ಅಲ್ಲದೇ ಜ. 17 ರಂದು ಬೆಳಿಗ್ಗೆ 09 ಗಂಟೆಗೆ ಕೊಪ್ಪಳ ನಗರದಲ್ಲಿ ಬೃಹತ್ ಜಾಗೃತಿ ಜಾಥಾ ಮತ್ತು ಬೆಳಿಗ್ಗೆ 11 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಜಾಗೃತಿ ಜಾಥಾ ಮತ್ತು ಕಾರ್ಯಕ್ರಮವು ಬಾಲ್ಯ ವಿವಾಹ, ಬಾಲ ಕಾಮರ್ಿಕತೆಯ ದುಷ್ಪರಿಣಾಮಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ಸ್ವಚ್ಛ ಭಾರತ, ಸಕರ್ಾರಿ ಶಾಲೆಗಳ ಉನ್ನತೀಕರಣ ಹಾಗೂ ಶಾಲೆಯಿಂದ ದೂರ ಉಳಿದ ಮಕ್ಕಳಿಗೆ ಮರಳಿ ಶಾಲೆಗೆ ತರುವ ಕುರಿತು ಅರಿವು ಮೂಡಿಸಲಾಗುವುದು. ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಗವಿಮಠದ ಸ್ವಾಮೀಜಿ, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಓ ವೆಂಕಟ್ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಸೇರಿದಂತೆ, ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು, ಚಲನಚಿತ್ರ ನಟ, ನಟಿಯರು ಮತ್ತು ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜಾಥಾ ಮತ್ತು ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಇಲಾಖೆ ಅಧಿಕಾರಿಗಳು ಆಗಮಿಸಿ ಈ ಆಂಧೋಲನವನ್ನು ಯಶಸ್ವಿಗೊಳಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ. ವನಿತಾ ತೊರವಿ ಅವರು ಮನವಿ ಮಾಡಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕ ಈರಣ್ಣ ಪಂಚಾಳ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕ ಕೃಷ್ಣಮೂತರ್ಿ ದೇಸಾಯಿ, ಯುನೆಸ್ಸೆಫ್ ಜಿಲ್ಲಾ ಮಕ್ಕಳ ರಕ್ಷಣ ಯೋಜನೆಯ ಹರೀಶ್ ಜೋಗಿ, ವಾತರ್ಾ ಇಲಾಖೆಯ ಎಂ. ಅವಿನಾಶ ಸೇರಿಂದತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 