ಜರ್ಮನ್ ಚಾನ್ಸೆಲರ್ ಜೊತೆಯಲ್ಲಿ ಗಾಳಿಪಟ ಹಾರಿಸಿದ ಪ್ರಧಾನಿ ಮೋದಿ
PM Modi flies kite with German Chancellor
ಅಹಮದಾಬಾದ್: ಸಬರಮತಿ ನದಿ ದಂಡೆಯಲ್ಲಿ ಜರುಗುತ್ತಿರುವ ‘ಅಂತರರಾಷ್ಟ್ರೀಯ ಗಾಳಿಪಟ ಉತ್ಸವ – 2026’
ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು.
ಗಾಳಿಪಟ ಉತ್ಸವದ ವೇಳೆ ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಪ್ರಧಾನಿ ಮೋದಿ ಅವರಿಗೆ ಸಾಥ್ ನೀಡಿದರು. ತೆರೆದ ವಾಹನದಲ್ಲಿ ಸಾಗುತ್ತ ಮೋದಿ ಹಾಗೂ ಮೆರ್ಜ್ ಅವರು ಗಾಳಿಪಟ ಹಾರಿಸಿದರು.
ಈ ವೇಳೆ ಉಭಯ ದೇಶಗಳ ನಾಯಕರು ಗಾಳಿಪಟ ತಯಾರಿಸುವ ಮಹಿಳಾ ಕುಶಲಕರ್ಮಿಗಳೊಂದಿಗೆ ಮಾತುಕತೆ ನಡೆಸಿದರು.
ರಾಜ್ಯ ಸರ್ಕಾರವು ಆಯೋಜಿಸಿರುವ ಅಂತರರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಭಾರತದ 1,000 ಉತ್ಸಾಹಿಗಳು ಹಾಗೂ 50 ದೇಶಗಳ 135 ಮಂದಿ ಭಾಗಿಯಾಗಿದ್ದಾರೆ. ಜ.14ರ ವರೆಗೆ ಇದು ಮುಂದುವರಿಯಲಿದೆ ಎಂದು ಗುಜರಾತ್ ಸರ್ಕಾರ ತಿಳಿಸಿದೆ.
ಮಕರ ಸಂಕ್ರಾತಿಗೂ ಮುನ್ನ ಪ್ರತಿವರ್ಷವೂ ಗಾಳಿಪಟ ಉತ್ಸವವನ್ನು ಆಚರಿಸಲಾಗುತ್ತದೆ. ಇದನ್ನು ವೀಕ್ಷಿಸಲು ಕಳೆದ ವರ್ಷ 3.83 ಲಕ್ಷ ಜನರು ಭೇಟಿ ನೀಡಿದ್ದರು. ಈ ವರ್ಷ 5 ಲಕ್ಷಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದೆ.
ಗಾಳಿಪಟ ಉತ್ಸವಕ್ಕೂ ಮುನ್ನ ಪ್ರಧಾನಿ ಮೋದಿ ಹಾಗೂ ಫ್ರೆಡ್ರಿಕ್ ಮೆರ್ಜ್ ಅವರು ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 