ಪಿ.ಯು.ಸಿ ಫಲಿತಾಂಶ: ಶ್ರೀ ವಿದ್ಯಾನಿಕೇತನ ಪಿ.ಯು.ಕಾಲೇಜ್ ರಾಜ್ಯಮಟ್ಟದ 2 ಮತ್ತು 3ನೇ ರಾ್ಯಂಕ್ಗಳ ಸಾಧನೆ
PUC Result: Sri Vidyaniketan PU College achieves 2nd and 3rd ranks at the state level
ಲೋಕದರ್ಶನ ವರದಿ
ಗಂಗಾವತಿ 10: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು2025-26ನೇ ಸಾಲಿನ ದ್ವಿತೀಯಪಿ.ಯು.ಸಿ ಫಲಿತಾಂಶವನ್ನು ಪ್ರಕಟಿಸಿದ್ದು. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಶ್ರೀರಾಮನಗರ, ವಡ್ಡರಹಟ್ಟಿ ಹಾಗೂಗಂಗಾವತಿ ಯಶ್ರೀ ವಿದ್ಯಾನಿಕೇತನ ಪಿ.ಯು.ಕಾಲೇಜ್ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ.
ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು1774 ವಿದ್ಯಾರ್ಥಿಗಳಲ್ಲಿ 1767 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕಶೇ 99.60ರಷ್ಟು ಫಲಿತಾಂಶವನ್ನು ಸಾಧಿಸಿದ್ದು,1463 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 295 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 9 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ ಕಾಲೇಜಿನ ವಿದ್ಯಾರ್ಥಿನಿಯಾದ ಕುಮಾರಿಯು. ಶ್ರಾವಣಿ600ಕ್ಕೆ 598ಅಂಕಗಳನ್ನು ಪಡೆಯುವ ಮೂಲಕ ಅಮೋಘ ಸಾಧನೆಗೈದುರಾಜ್ಯಮಟ್ಟದಲ್ಲಿ2ನೇ ರಾ್ಯಂಕ್ ಗಳಿಸಿದ್ದಾಳೆ. ಅದೇ ರೀತಿಕುಮಾರ ಅರ್ಜುನ್ ಗ್ವಾಟಗಿ600ಕ್ಕೆ597 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ 3ನೇ ರಾ್ಯಂಕ್ಪಡೆದಿದ್ದು, ಕುಮಾರಿ ವೈಷ್ಣವಿ600ಕ್ಕೆ 595 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ 5ನೇ ರಾ್ಯಂಕ್ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಗೈದಿದ್ದಾರೆ.
ಅದೇರೀತಿ ವಾಣಿಜ್ಯ ವಿಭಾಗದಲ್ಲಿ ಕುಮಾರಿ ವಂದನಾಜೈನ್ 600ಕ್ಕೆ 594 ಅಂಕಗಳನ್ನು ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ7ನೇ ರಾ್ಯಂಕ್ ಗಳಿಸುವ ಮೂಲಕ ಅತ್ಯುತ್ತಮ ಸಾಧನೆಯನ್ನು ಗೈದಿದ್ದಾಳೆ.
ಕಲ್ಯಾಣ ಕರ್ನಾಟಕ ಶಿಕ್ಷಣದಲ್ಲಿ ಹಿಂದುಳಿದಿದೆ ಎಂಬ ಹಣೆಪಟ್ಟಿಯನ್ನು ತೊಲಗಿಸುವ ನಿಟ್ಟಿನಲ್ಲಿಗ್ರಾಮೀಣ ಪ್ರದೇಶದಲ್ಲಿರುವ ಶ್ರೀ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯು ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ರಾಜ್ಯಮಟ್ಟದ ಅತ್ಯುನ್ನತ್ತ ರಾ್ಯಂಕ್ಗಳನ್ನು ಪಡೆದು ಅಮೋಘ ಸಾಧನೆಯನ್ನು ಗೈದಿದೆ.
ಸತತ ಉತ್ತಮ ಫಲಿತಾಂಶ ದಾಖಲಿಸುವ ಮೂಲಕ ಶ್ರೇಷ್ಠ ಸಾಧನೆ ಮಾಡಿದಎಲ್ಲ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ನೆಕ್ಕಂಟಿಸೂರಿಬಾಬು ಅವರು ಹೃತ್ತೂರ್ವಕವಾಗಿ ಅಭಿನಂದಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 