ಪಡೇಕನೂರ ಅಂಗನವಾಡಿ ಕೇಂದ್ರ-3 ಸಿಇಒ ರಿಷಿ ಆನಂದ ಭೇಟಿ
Padekanur Anganwadi Center-3 CEO Rishi Ananda met
ತಾಳಿಕೋಟಿ 12 : ತಾಲೂಕಿನ ಕೊಣ್ಣೂರ ಗ್ರಾಮ ಪಂಚಾಯತಿಯ ಪಡೇಕನೂರ ಗ್ರಾಮಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಬುಧವಾರ ಭೇಟಿ ನೀಡಿ ಮೂಲಸೌಕರ್ಯಗಳ ಕುರಿತು ಪರೀಶೀಲನೆ ನಡೆಸಿದರು. ಪಡೇಕನೂರ ಗ್ರಾಮದೊಳಗಿನ ಬಾಕಿ ರಸ್ತೆಗಳ ಸಿಸಿ, ಚರಂಡಿ ನಿರ್ಮಾಣ ಮತ್ತು ಪಡೇಕನೂರ ಗ್ರಾಮದಿಂದ ಕೊಣ್ಣೂರ ಗ್ರಾಮದವರೆಗೆ ಸಿಸಿ ರಸ್ತೆ ನಿರ್ಮಾಣದ ಅವಶ್ಯಕತೆ ಕುರಿತು ಪರೀಶೀಲನೆ ಮಾಡಿದರು.ಪಡೇಕನೂರ ಗ್ರಾಮದಿಂದ ಹಳ್ಳೂರ ಗ್ರಾಮದವರೆಗಿನ ರಸ್ತೆ ನಿರ್ಮಾಣ ಕಾಮಗಾರಿಯನ್ನು ಪರೀಶೀಲಿಸಿ ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ಕ್ರಮವಹಿಸಲು ಡಬ್ಲ್ಯೂಇ ವಿದ್ಯಾಧರ ನ್ಯಾಮನಗೌಡ ಅವರಿಗೆ ಗುಣಮಟ್ಟದ ಕಾಮಗಾರಿ ಮಾಡಲು ಸೂಚಿಸಿದರು.
ನಂತರ ಪಡೇಕನೂರ ಗ್ರಾಮದ ಅಂಗನವಾಡಿ ಕೇಂದ್ರ-3 ಕ್ಕೆ ಭೇಟಿ ನೀಡಿ ಮಕ್ಳಳ ಹಾಜರಾತಿ ಮತ್ತು ಮಕ್ಕಳಿಗೆ ಉತ್ತಮ ಗುಣಮಟ್ಟದ ಅಹಾರ ನೀಡುತ್ತಿರುವ ಕುರಿತು ಪರೀಶೀಲಿಸಿ, ಸಮಯಕ್ಕೆ ಸರಿಯಾಗಿ ಮಕ್ಕಳ ಪೌಷ್ಟಿಕ ಆಹಾರವನ್ನು ತಯಾರಿಸಿ ಉಣಬಡಿಸಬೇಕು. ಬೇಸಿಗೆ ಪ್ರಾರಂಭವಾಗಿದ್ದು, ಆದಷ್ಟು ನೆರಳಲ್ಲೆ ಮಕ್ಕಳ ಪಾಲನೆ ಮಾಡಬೇಕು ಎಂದು ಅಂಗನವಾಡಿ ಕಾರ್ಯಕರ್ತೆಗೆ ಸೂಚಿಸಿದರು.ಈ ಸಂದರ್ಭದಲ್ಲಿ ಪಿ.ಆರ್.ಇ.ಡಿ. ಡಬ್ಲ್ಯೂಇ ವಿದ್ಯಾಧರ ನ್ಯಾಮನಗೌಡ, ಎ.ಡಬ್ಲ್ಯೂ ಶಿವರಾಜ ನಾಯಕ, ಅಭಿಯಂತರ ಸಂತೋಷ ಲಮಾಣಿ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 