ಪಹರೆ ಸಂಸ್ಥೆಗೆ ‘ಇಂದಿರಾ ಪ್ರಿಯದರ್ಶಿನಿ ಪರಿಸರ’ ಪ್ರಶಸ್ತಿ ಪ್ರದಾನ
Pahare organization presented with ‘Indira Priyadarshini Environment Award’
ಕಾರವಾರ 04: ಪರಿಸರ ಸ್ವಚ್ಛತೆ ಮತ್ತು ಜಾಗೃತಿ ಕ್ಷೇತ್ರದಲ್ಲಿ ದಶಕಕ್ಕೂ ಹೆಚ್ಚು ಕಾಲ ಕಾರವಾರದಲ್ಲಿ ಕೆಲಸ ಮಾಡುತ್ತಿರುವ ಪಹರೆ ವೇದಿಕೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ಮಂಗಳವಾರ ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ಯನ್ನು ನೀಡಲಾಯಿತು.ಪರಿಸರ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ನರೇಂದ್ರಸ್ವಾಮಿ ಅವರು ವೇದಿಕೆಯ ಅಧ್ಯಕ್ಷ ನಾಗರಾಜಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಶಿವರಾಮ ಹೆಬ್ಬಾರ ಮತ್ತು ಮಹೇಶ ತೆಂಗಿನಕಾಯಿ ಸೇರಿದಂತೆ ಹಲವು ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ’ಪಹರೆ’ ಸಂಸ್ಥಾಪಕ ಅಧ್ಯಕ್ಷ , ಈ ಗೌರವಕ್ಕಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ತಿಳಿಸಿದರು. ಸಮಾಜದ ಸ್ವಚ್ಛತೆಗಾಗಿ ಶ್ರಮಿಸಿದ ಪಹರೆಯ ಎಲ್ಲಾ ಸಹೋದರ, ಸಹೋದರಿಯರ ಸೇವೆಗೆ ಈ ಪ್ರಶಸ್ತಿಯು ಸಮರೆ್ಣ ಎಂದರು. ಕಳೆದ ಹತ್ತು ದಿಂದ ಕಾರವಾರದಲ್ಲಿ ಪಹರೆ ವೇದಿಕೆ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಲು ಪ್ರತಿ ವಾರಕ್ಕೊಮ್ಮೆ ಒಂದು ಘಂಟೆ ಸ್ವಚ್ಚತೆಯ ಕಾರ್ಯವನ್ನ ಪ್ರಾರಂಭಿಸಿತ್ತು. ಪ್ರತಿ ಶನಿವಾರ ಒಂದು ತಾಸು ಸ್ವಚ್ಚತೆ ನಡೆಸಿಕೊಂಡು ಬಂದಿದೆ. ಕಾರವಾರ ಮಾತ್ರವಲ್ಲದೇ ಜಿಲ್ಲೆಯ ವಿವಿದೆಡೆ ತೆರಳಿ ದೇವಸ್ಥಾನ,ಕಡಲ ತೀರಗಳು, ಕೆರೆಗಳ ಸ್ವಚ್ಚತೆ ಕಾರ್ಯವನ್ನ ಆಯೋಜಿಸುತ್ತಾ ಬಂದಿದೆ.....
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 