ಶಾಲಾ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆ: ಪ್ರಮಾಣ ಪತ್ರ ವಿತರಣೆ
ಕೊಪ್ಪಳ 23 : ಕರ್ನಾಟಕ ಸರ್ಕಾರ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಅಜೀಂ ಪ್ರೇಮ್ ಜಿ ಫೌಂಡೇಶನ್ ಕೊಪ್ಪಳ ಇವರ ಸಂಯೋಗದಲ್ಲಿ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ-2025ರ ಅಂಗವಾಗಿ ಮಂಗಳವಾರ ಭಾಗ್ಯನಗರದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿತ್ರಕಲೆ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ವಾಯ್ ಶೆಟ್ಟೆಪ್ಪನವರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ, ಮಕ್ಕಳು ಇಂತಹ ವೇದಿಕೆಗಳನ್ನು ಸಮರ್ಕವಾಗಿ ಬಳಸಿಕೊಳ್ಳಬೇಕು ಹಾಗೂ ಸಿಕ್ಕ ಅವಕಾಶವನ್ನು ತಪ್ಪಿಸಿಕೊಳ್ಳಬಾರದು. ಸಾಧನೆ ಮಾಡಲು ಒಳ್ಳೆಯ ಶಿಕ್ಷಣ ಆರೋಗ್ಯ ಪೌಷ್ಟಿಕ ಆಹಾರ ಸೇವನೆ ಮಾಡಬೇಕು ಎಂದು ಹೇಳಿದರು.ಬಿ.ಆರ್.ಪಿ ಮಂಜುನಾಥ ಅವರು ಮಾತನಾಡಿ, ಮಕ್ಕಳು ಪಠ್ಯೇದ ಜತೆಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಉತ್ತಮ ಸಾಧನೆ ಮಾಡಬೇಕು. ಸ್ಪರ್ಧೆಯಲ್ಲಿ ಸೋಲು ಗೆಲುವು ಸಹಜ ಆದ್ದರಿಂದ ಸೋತವರು ಎದೆಗುಂದದೆ ಮರಳಿ ಪ್ರಯತ್ನವನ್ನು ಮಾಡಬೇಕೆಂದರು.
ಸಿ.ಆರ್.ಪಿ ಶೈಲನಾ ಭಾಷಾ ವಾಲಿಕಾರ್ ಅವರು ಮಾತನಾಡಿ ಮಕ್ಕಳು ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕಲೆಯನ್ನು ಪ್ರದರ್ಶಿಸಬೇಕು. ಇಂತಹ ಸ್ಪರ್ಧೆಗಳು ಮಕ್ಕಳಿಗೆ ಅವಶ್ಯಕವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾಗ್ಯನಗರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾದ ಲಕ್ಷ್ಮಪ್ಪ ತಳಕಲ್ ಅವರು ಮಾತನಾಡಿ, ಇಂತಹ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಹಮ್ಮಿಕೊಂಡಿದ್ದು, ನಮಗೆ ತುಂಬಾ ಸಂತೋಷವಾಗಿದೆ ಎಂದರು.
ಶಾಲೆಯ ಚಿತ್ರಕಲೆ ಶಿಕ್ಷಕ ಯಲ್ಲಪ್ಪ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಬಾಲ ಭವನ ಕಾರ್ಯಕ್ರಮ ಸಂಯೋಜಕ ಮೆಹಬೂಬ ಸಾಬ್ ಇಲಾಹಿ ಸ್ವಾಗತಿಸಿದರು. ಪ್ರಮೋದ್ ಕುಮಾರ್ ಅವರು ವಂದಿಸಿದರು.
ಈ ಕಾರ್ಯಕ್ರಮದಲ್ಲಿ ತೀರ್ುಗಾರರಾಗಿ ಬದ್ರಿ ಪುರೋಹಿತ್, ಶಾಲೆಯ ಸಹಶಿಕ್ಷಕರ ವೃಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ವರ್ಗ ಹಾಗೂ ಶಾಲೆಯ ಎಲ್ಲಾ ಮಕ್ಕಳು ಭಾಗವಹಿಸಿದ್ದರು.