ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆ ಪ್ಪಳ ಜಿಲ್ಲಾಡಳಿತದಿಂದ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ ಕರಪತ್ರ ಬಿಡುಗಡೆ
Pallal District Administration releases pamphlet on Sparsh Leprosy Awareness Campaign in memory of
ಕೊಪ್ಪಳ 30: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಜಿಲ್ಲಾ ಕ್ಷಯರೋಗ ಮತ್ತು ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಾರ್ಯಾಲಯ ಕೊಪ್ಪಳ, ಇವರ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರ ಹುತಾತ್ಮರಾದ ಈ ದಿನದಂದು ಶ್ರದ್ದಾಪೂರ್ವಕವಾಗಿ ಸ್ಮರಿಸಿ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆಯಿತು.
ಜಿಲ್ಲಾಧಿಕಾರಿ ಡಾ.ಸುರೇಶ್ ಬಿ. ಇಟ್ನಾಳ ಅವರು ಮಾತನಾಡಿ, ಗ್ರಾಮೀಣ ಪ್ರದೇಶಗಳಿಗೆ ಅಧಿಕಾರಿಗಳು ಹೋಗಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಕುರಿತು ಜಾಗೃತಿ ಮೂಡಿಸಿ ಕುಷ್ಠರೋಗವನ್ನು ಪತ್ತೆಹಚ್ಚಿ ಚಿಕಿತ್ಸೆ ಕೊಡುವ ಕೆಲಸ ಮಾಡಬೇಕು. ಈ ರೋಗದ ತಪ್ಪು ಕಲ್ಪನೆಗಳನ್ನು ಜನರಲ್ಲಿ ಹೋಗಲಾಡಿಸಿ “ತಾರತಮ್ಯವನ್ನು ಕೊನೆಗೊಳಿಸುವುದು, ಘನತೆಯನ್ನು ಕಾಪಾಡುವುದು'' ಎಂಬ ಘೋಷವಾಕ್ಯವನ್ನು ಹೇಳಿ, “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ-2026'' ಕರಪತ್ರಗಳನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಟಿ.ಲಿಂಗರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ಕರ್ಣಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 