ಪಲ್ಸ ಪೋಲಿಯೊ ಅಭಿಯಾನಕ್ಕೆ ಚಾಲನೆ

ಧಾರವಾಡ 10: ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಅಧೀನದ ಹೆರಿಗೆ ಆಸ್ಪತ್ರೆಯಲ್ಲಿ ಚಿಕ್ಕ ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿಹಾಕುವ ಮೂಲಕ ಜಿ.ಪಂ ಅಧ್ಯಕ್ಷರಾದ ವಿಜಯಲಕ್ಷ್ಮಿ ಪಾಟೀಲ ಹಾಗೂ ಜಿಲ್ಲಾಧಿಕಾರಿ ದೀಪಾ ಚೋಳನ ಚಾಲನೆ ನೀಡಿದರು.

ಧಾರವಾಡ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಜಿಲ್ಲೆಯ ಒಟ್ಟು 2,48,868 ಮಕ್ಕಳಿಗೆ ಪೋಲಿಯೊ ಹನಿ  ಹಾಕುವ ಗುರಿ ಹೊಂದಲಾಗಿದೆ.

ಮಾರ್ಚ 10, 11, 12 ಮತ್ತು 13 ರಂದು ನಗರ ಪ್ರದೇಶದಲ್ಲಿ ಮತ್ತು ಮಾರ್ಚ 10, 11 ಮತ್ತು 12 ರಂದು ಗ್ರಾಮೀಣ ಪ್ರದೇಶದಲ್ಲಿರುವ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಹನಿ ಹಾಕಲಾಗುತ್ತಿದೆ.

ಜಿಲ್ಲೆಯಲ್ಲಿ ಸ್ಥಾಪಿತ ಹಾಗೂ ಸಂಚಾರಿ ಸೇರಿದಂತೆ 1,039 ಲಸಿಕಾ ಕೇಂದ್ರಗಳನ್ನು ಆರಂಭಿಸಲಾಗಿದ್ದು, ವೈದ್ಯರು, ಆರೋಗ್ಯ ಸಹಾಯಕರು, ಆಶಾ, ಅಂಗನವಾಡಿ ಸೇರಿದಂತೆ ಒಟ್ಟು 3,959  ಸಿಬ್ಬಂದಿಗಳು ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಜಿ.ಪಂ.ಸಿ.ಇ.ಓ ಡಾ.ಬಿ.ಸಿ.ಸತೀಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಆರ್.ಎಂ.ದೊಡ್ಡಮನಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಗೀರಿಧರ ಕುಕನೂರ, ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷ ಡಾ.ವಿ.ಡಿ.ಕಪರ್ೂರಮಠ, ರಾಜ್ಯ ನೊಡೆಲ್ ಅಧಿಕಾರಿ ಡಾ.ಗೀತಾ ಬಾಲಿ ಸೇರಿದಂತೆ ರೊಟರಿ, ಲಯನ್ಸ್ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಆರ್.ಸಿ.ಎಚ್.ಓ ಡಾ.ಎಚ್.ಆರ್.ಪುಷ್ಪಾ ಸ್ವಾಗತಿಸಿದರು ಹೆರಿಗೆ ಆಸ್ಪತ್ರೆ ಮುಖ್ಯ ಆರೋಗ್ಯ ಅಧಿಕಾರಿ ಡಾ.ಶೋಭಾ ಮೂಲಿಮನಿ ವಂದಿಸಿದರು. ಆರೋಗ್ಯ ಶಿಕ್ಷಣ ಅಧಿಕಾರಿ ಎಲ್.ಎಸ್.ಅಂಬಲಿ ಕಾರ್ಯಕ್ರಮ ನಿರೂಪಿಸಿದರು.