ಅರೆಕಾಲಿಕ ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ
Part-time volunteer training workshop
ಹಾವೇರಿ 07 : ನಿಸ್ವಾರ್ಥ ಮನೋಭಾವದಿಂದ ಸಮಾಜ ಸೇವೆ ಮಾಡಬೇಕು, ಅಂದಾಗ ಮಾತ್ರ ಸಮಾಜದಲ್ಲಿನ ಜನರು ಕಾನೂನು ಅರಿವು ಹೊಂದಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಾ್ಪ ಎನ್. ಅವರು ಹೇಳಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಬುಧವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಓಟ್‌ಲಾಡ್ ಇಂಡಿಯಾ ಪೌಂಡೇಷನ್ ಸಹಯೋಗದಲ್ಲಿ ಅರೆಕಾಲಿಕ ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಮನೆ ಹಾಗೂ ಮನ ಮನಕ್ಕೂ ಕಾನೂನಿನ ಅರಿವು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಿಗುವ ಕಾನೂನು ನೆರವು ತಿಳಿಸುವಲ್ಲಿ ಅರೆಕಾಲಿಕ ಸ್ವಯಂ ಸೇವಕರ ಸೇವೆ ಅಗತ್ಯವಾಗಿದೆ. ಸ್ವಯಂ ಸೇವಕರು ಸಮಾಜ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಓಟ್‌ಲಾಡ್ ಇಂಡಿಯಾ ಪೌಂಡೇಷನ್‌ನ ವಂದನಾ ಕೆ ಹಾಗೂ ತುಷಿತಾ ಎಸ್. ಉಪನ್ಯಾಸ ನೀಡಿದರು.
ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಜಿ.ಶಿವಳ್ಳಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶರಾದ ಎನ್.ಎಂ.ರಮೇಶ, ಮಹ್ಮದ್ ಅನ್ವರ ಹುಸೇನ ಮೊಗಲಾನಿ, ಶೋಭಾ ಬಿ.ಜಿ., ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ, ನ್ಯಾಯಾಧೀಶರಾದ ಆಕರ್ಷ ಎಂ., ಬಿಪಿನ್ ಎಚ್.ಎಂ., ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಸಿ.ಸಿದ್ದನಗೌಡರ ಇತರರು ಉಪಸ್ಥಿತರಿದ್ದರು.
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 