ವಿದ್ಯುತ್ ದೀಪದ ಕಂಭ ಅಳವಡಿಕೆ ಕಾರ್ಯಕ್ರಮ ವೀಕ್ಷಿಸಿದ ಪಟೇಲ್
ಕೊಪ್ಪಳ 11: ನಗರದ ಬಸವೇಶ್ವರ ಸರ್ಕಲ್ ದಿಂದ ಶ್ರೀ ಗವಿಮಠಕ್ಕೆ ಹೋಗುವ ಮುಖ್ಯ ರಸ್ತೆಗೆ ಹೊಸ ವಿದ್ಯುತ್ ಕಂಬ ಅಳವಡಿಕೆ ಹಾಗೂ ರಸ್ತೆ ಮಧ್ಯಭಾಗದಲ್ಲಿ ಸಸಿ ಹಚ್ಚುವ ಕಾಮಗಾರಿಯನ್ನು ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ರವರು ಶನಿವಾರದಂದು ವೀಕ್ಷಣೆ ಮಾಡಿದ್ದರು.
ಗವಿಮಠದ ಜಾತ್ರಾ ಮಹೋತ್ಸವಕ್ಕೆ ಬರುವ ಲಕ್ಷಾಂತರ ಸಂಖ್ಯೆಯ ಭಕ್ತಾದಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೂಡಲೇ ತ್ವರಿತಗತಿಯಲ್ಲಿ ವಿದ್ಯುತ್ ಕಂಬ ಅಳವಡಿಕೆ ಮಾಡಿ ಅನುಕೂಲಕರ ವಾತಾವರಣ ಕಲ್ಪಿಸಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ನಗರಸಭೆಯ ಅಧಿಕಾರಿಗಳಿಗೆ ಕೊಟ್ಟು ನಿಟ್ಟಿನ ಸೂಚನೆ ಜಾರಿಗೊಳಿಸಿದರುಈ ಸಂದರ್ಭದಲ್ಲಿ ನಗರಸಭೆಯ ಅಧಿಕಾರಿಗಳು ಹಾಗೂ ವಿದ್ಯುತ್ ಇಲಾಖೆ ವಿದ್ಯುತ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು