ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಪಠಾಣ

Pathana offered condolences to the families of the deceased

ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಪಠಾಣ 

ಶಿಗ್ಗಾವಿ 22 : ಹಾವೇರಿ ಜಿಲ್ಲೆ ಸವಣೂರತಾಲೂಕಿನ ಹತ್ತುಜನರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್ ಬಳಿ ನಡೆದ ಅಪಘಾತದಲ್ಲಿ ನಿಧನ ಹೊಂದಿರುವ ಸುದ್ದಿ ಮನಸ್ಸಿಗೆ ಅಘಾತವನ್ನುಂಟು ಮಾಡಿದೆ 

ಎಂದು ಶಾಸಕ ಯಾಸೀರ ಖಾನ ಪಠಾಣ ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ದೇವರು ಕುಟುಂಬಸ್ಥರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.  

ಅತ್ಯಂತ ಬಡ ಕುಟುಂಬಕ್ಕೆ ಸೇರಿದ ಮೃತರು ತಮ್ಮ ಉಪ ಜೀವನಕ್ಕಾಗಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದು ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರವನ್ನು ಅಲ್ಲದೇ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಚಿಕಿತ್ಸಾ ವೆಚ್ಚವನ್ನು ಸರಕಾರ  ಬರಿಸುತ್ತದೆಎಂದರು.