ಗದಗ 16: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸುವ ಮೂಲಕ ದೇಶದ ಏಕತೆಗೆ ಹಾಗೂ ಸಮಗ್ರತೆಗೆ ಹೊಸ ಆಯಾಮ ನೀಡಿರುವ ಸನ್ನಿವೇಶದಲ್ಲಿ ನಮ್ಮ ಕರ್ತವ್ಯಗಳ ನಿರ್ವಹಣೆಗೆ ದೇಶಕ್ಕಾಗಿ ದುಡಿಯಲು ದೇಶಭಕ್ತಿಯೇ ಪ್ರೇರಣೆಯಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ನುಡಿದರು.
ಗದಗ-ಬೆಟಗೇರಿ ನಗರದ ಎಚ್.ಕೆ.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜರುಗಿದ ಸ್ವಾತಂತ್ರೋತ್ಸವ ಅಂಗವಾಗಿ ಸಾರ್ವಜನಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ವಿವಿಧ ದಳಗಳ ವೀಕ್ಷಣೆ ಮಾಡಿ ಆಕರ್ಷಕ ಪಥ ಸಂಚಲನದಲ್ಲಿ ಗೌರವ ರಕ್ಷೆ ಸ್ವೀಕರಿಸಿ ಅವರು ಮಾತನಾಡಿದರು. ಭಾರತದ ರಾಷ್ಟ್ರೀಯ ಚಳುವಳಿಯ ಘನ ಇತಿಹಾಸ ಅದನ್ನು ನಿರಂತರವಾಗಿ ಭಾರತೀಯರಲ್ಲಿ ಪ್ರಜ್ವಲಿಸುವಂತೆ ಮಾಡಿದ ಹಿರಿಯ ನಾಯಕರು, ಸ್ವಾತಂತ್ಯ್ರ ಸೇನಾನಿಗಳ ಹಾಗೂ ಅಸಂಖ್ಯಾತ ಭಾರತೀಯರ ತ್ಯಾಗ ಬಲಿದಾನಗಳ ಫಲ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಗದಗ ಜಿಲ್ಲೆಯು ತನ್ನದೇ ಆದ ಕೊಡುಗೆ ನೀಡಿದೆ ಎಂದ ಜಿಲ್ಲಾಧಿಕಾರಿಗಳು ಜಿಲ್ಲೆಯು ಕಳೆದ ವರ್ಷದಲ್ಲಿ ವಿವಿಧ ರಂಗಗಳಲ್ಲಿ ಸಾಧಿಸಿದ ಅಭಿವೃದ್ಧಿಯ ಮಾಹಿತಿ ನೀಡಿದರು.
ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ 17.67 ಲಕ್ಷ ಮಾನವ ದಿನಗಳ ಉದ್ಯೋಗ ಸೃಜಿಸಲಾಗಿದೆ. ಸ್ವಚ್ಛ ಭಾರತ ಮಿಶನ ಅಡಿ ಜಿಲ್ಲೆಯು 1.35 ಲಕ್ಷ ಕುಟುಂಬಗಳಿಗೆ ಶೌಚಾಲಯ ನಿಮರ್ಿಸಲಾಗಿದೆ. 9 ಸ್ಥಳೀಯ ಸಂಸ್ಥೆ ಹಾಗೂ ಆಯ್ದ 25 ಗ್ರಾಮ ಪಂಚಾಯಗಳಲ್ಲಿ ಘನ ತ್ಯಾಜ್ಯದ ವ್ಶೆಜ್ಞಾನಿಕ ನಿರ್ವಹಣೆಗೆ ಕೈಗೆತ್ತಿಕೊಳ್ಳಲಾಗಿದೆ. ಮುಖ್ಯ ಮಂತ್ರಿಗಳ ಗ್ರಾಮ ವಿಕಾಸ ಯೋಜನೆಯಡಿ ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರಗಳ 37 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಮಾದರಿ ಗ್ರಾಮ ಯೋಜನೆಯಡಿ ಪರಿಶಿಷ್ಟ ಜಾತಿ ಜನರಿರುವ 6 ಗ್ರಾಮಗಳನ್ನು ತಲಾ 1 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಆಯ್ಕೆ ಮಾಡಲಾಗಿದೆ. ತೀವ್ರ ಬರ ಪರಿಸ್ಥಿತಿಯಲ್ಲೂ ಕೂಡಾ ಜಿಲ್ಲೆಯ 344 ಗ್ರಾಮಗಳಿಗೆ ಟ್ಯಾಂಕರ ಬಳಸದೇ ನೀರು ಪೂರೈಸಿದ , ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಸಮುದಾಯ ಸಂವಹನ ವಿಭಾಗದಲ್ಲಿ ಸತತ ಎರಡನೇ ಬಾರಿ ರಾಷ್ಟ್ರೀಯ ಪುರಸ್ಕಾರ ಹಾಗೂ ಜಲಶಕ್ತಿ ಅಭಿಯಾನದಡಿ ದೇಶದ ಆಯ್ದ 256 ಜಿಲ್ಲೆಗಳ ಯೋಜನಾನುಷ್ಠಾನದಲ್ಲಿ ಗದಗ ಜಿಲ್ಲೆ ಮೊದಲ 10 ಜಿಲ್ಲೆಗಳಲ್ಲಿ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಜಿಲ್ಲಾಧಿಕಾರಿಗಳು ನುಡಿದರು.
ಅಗಸ್ಟ ತಿಂಗಳಲ್ಲಿ ಗದಗ ಜಿಲ್ಲೆಯ ನರಗುಂದ, ರೋಣ ತಾಲೂಕುಗಳು ಮಲಪ್ರಭಾ ಮತ್ತು ಬೆಣ್ಣೆಹಳ್ಳಗಳ ಪ್ರವಾಹದಿಂದಾಗಿ ಹಾಗೂ ತುಂಗಭದ್ರಾ, ವರದಾ ನದಿಗಳ ನೆರೆಯಿಂದಾಗಿ ಶಿರಹಟ್ಟಿ ಹಾಗೂ ಮುಂಡರಗಿ ಗ್ರಾಮಗಳ ಜನರು ಸಂಕಷ್ಟದಲ್ಲಿದ್ದಾರೆ. ಒಟ್ಟು 40 ಗ್ರಾಮಗಳ ಪ್ರವಾಹ ಪೀಡಿತವಾಗಿದ್ದು 44 ಪರಿಹಾರ ಕೇಂದ್ರಗಳನ್ನು ತೆರೆದು 13,200 ಕುಟುಂಬಗಳ 48,282 ಜನರಿಗೆ ಆಶ್ರಯ ಒದಗಿಸಿ ಊಟ,ವಸತಿ,ವೈಧ್ಯಕೀಯ ಚಿಕಿತ್ಸೆಗೆ ವ್ಯವಸ್ಥೆಯನ್ನು ಮಾಡಲಾಗಿದೆ. ನೆರೆ ಸಂತ್ರಸ್ಥರಿಗೆ ಅಗತ್ಯ ಸೂರು ಕಲ್ಪಿಸಲು ಇತರ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಡಳಿತವು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಲಿದೆ. ಜಿಲ್ಲೆಯ ಪ್ರವಾಹ ಪರಿಸ್ಥಿತಿಯನ್ನು ಸಂತ್ರಸ್ಥರ ಸಂಕಷ್ಟವನ್ನು ನೀಗಿಸುವ ನಿಟ್ಟಿನಲ್ಲಿ ವಿವಿಧ ರೀತಿಯಲ್ಲಿ ಸಹಕಾರ ನೀಡುತ್ತಿರುವ ಎಲ್ಲ ಸಂಘ-ಸಂಸ್ಥೆಗಳು, ಮಠಾಧೀಶರಿಗೆ, ಶಾದಿಮಹಲ್ ಮುಂತಾದ ಧಾಮರ್ಿಕ ಸಂಸ್ಥೆ, ಸಂಘಟನೆಗಳಿಗೆ, ಸಾರ್ವಜನಿಕರಿಗೆ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಹೃದಯಪೂರ್ವಕ ಧನ್ಯವಾದಗಳನ್ನು ಅಪರ್ಿಸಿದರು.
ವಿಧಾನ ಸಭಾ ಶಾಸಕ ಎಚ್.ಕೆ. ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು, ಜಿ.ಪಂ. ಅಧ್ಯಕ್ಷ ಎಸ್.ಪಿ.ಬಳಿಗಾರ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಜಿ.ಪಂ. ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ಜಿ.ಪಂ., ತಾ.ಪಂ.,ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ಸ್ವಾತಂತ್ರ್ಯ ಸೇನಾನಿಗಳು, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಸಾರ್ವಜನಿಕರು, ವಿವಿಧ ಶಾಲೆಗಳ ಗುರುವೃಂದ ಹಾಗೂ ಶಾಲಾ ಮಕ್ಕಳು, ಸಾರ್ವಜನಿಕರು ಸಮಾರಂಭದಲ್ಲಿ ಭಾಗವಹಿಸಿದ್ದರು. ದತ್ತಪ್ರಸನ್ನ ಪಾಟೀಲ ಹಾಗೂ ಲಕ್ಷ್ಮೀದೇವಿ ಗವಾಯಿ ಕಾರ್ಯಕ್ರಮ ನಿರೂಪಿಸಿದರು.