ಅನಧಿಕೃತ ಸ್ವತ್ತುಗಳಿಗೆ ಕಂದಾಯ ಪಾವತಿಸಿ ಇ-ಖಾತಾ ಪಡೆದುಕೊಳ್ಳಿ
Pay revenue for unauthorized assets and get e-account
ಅನಧಿಕೃತ ಸ್ವತ್ತುಗಳಿಗೆ ಕಂದಾಯ ಪಾವತಿಸಿ ಇ-ಖಾತಾ ಪಡೆದುಕೊಳ್ಳಿ
ಹಾನಗಲ್ 12: ರಾಜ್ಯ ಸರ್ಕಾರ ಪುರಸಭೆ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತರುತ್ತಿದ್ದು, ಇದರಿಂದ ಅನಧಿಕೃತ ಸ್ವತ್ತುಗಳ (ಬಿ-ಖಾತಾ) ಮಾಲೀಕರು ತಮ್ಮ ಸ್ವತ್ತಿನ ಕಂದಾಯ ಪಾವತಿಸಿ ಅತ್ಯಂತ ಸರಳ ವಿಧಾನಗಳ ಮೂಲಕ ಇ-ಖಾತಾ ಪಡೆಯಬಹುದಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು. ಇಲ್ಲಿ ಇ-ಖಾತಾ ಅಭಿಯಾನಕ್ಕೆ ಚಾಲನೆ ನೀಡಿದ ಅವರು, ನಗರ ವ್ಯಾಪ್ತಿಯಲ್ಲಿ ನಿವೇಶನ, ಮನೆಯ ಆಸ್ತಿಗಳನ್ನು ಹೊಂದಿರುವರು ದಾಖಲೆ ಸಮೇತ ಪುರಸಭೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಿದರೆ ಕೂಡಲೇ ಇ-ಖಾತಾ ಮಾಡಿಕೊಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಅನಧಿಕೃತ ಸ್ವತ್ತುಗಳನ್ನು ಅಧಿಕೃತಗೊಳಿಸಿ ಇ-ಖಾತಾ ಮಾಡಿಕೊಡಬೇಕು ಎನ್ನುವುದು ಬಹಳ ವರ್ಷಗಳ ಬೇಡಿಕೆಯಾಗಿತ್ತು. ಅದನ್ನೀಗ ರಾಜ್ಯ ಸರ್ಕಾರ ಸಾಕಾರಗೊಳಿಸಿದೆ. ಸಾರ್ವಜನಿಕರು ಈ ಅಭಿಯಾನದ ಸದ್ಭಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಮೂರು ತಿಂಗಳ ಕಾಲ ಇ-ಖಾತೆ ಅಭಿಯಾನ ನಡೆಯಲಿದೆ. ಖಾತೆ ಮಾಡಿಸಿಕೊಳ್ಳಲು ಮಧ್ಯವರ್ತಿಗಳ ಮೊರೆ ಹೋಗಬೇಡಿ. ನೇರವಾಗಿ ಪುರಸಭೆ ಕಚೇರಿಗೆ ತೆರಳಿ ದಾಖಲೆ ಒದಗಿಸಿ ಇ-ಖಾತೆ ಪಡೆದುಕೊಳ್ಳಿ ಎಂದು ಶಾಸಕ ಮಾನೆ ಮನವಿ ಮಾಡಿದರು. ಪುರಸಭೆ ಮುಖ್ಯಾಧಿಕಾರಿ ಜಗದೀಶ ವೈ.ಕೆ.ಮಾತನಾಡಿ, ಸ್ವತ್ತಿನ ಮಾಲೀಕರು ಪುರಸಭೆಗೆ ಭೇಟಿ ನೀಡಿ, ಸ್ವತ್ತಿನ ಮಾಲೀಕತ್ವದ ದಾಖಲೆಗಳಾದ ನೋಂದಾಯಿತ ಪತ್ರಗಳು, ಚಾಲ್ತಿ ಸಾಲಿನವರೆಗೆಕಂದಾಯ ಪಾವತಿ ರಶೀದಿ, ಋಣಭಾರ ಪ್ರಮಾಣ ಪತ್ರ, ಮಾಲೀಕರ ಫೋಟೊ, ಆಧಾರ್‌ಕಾರ್ಡ್ ಸಲ್ಲಿಸಿ ಇ-ಖಾತಾ ಪಡೆದುಕೊಳ್ಳಬಹುದಾಗಿದೆಎಂದರು. ಪುರಸಭೆಅಧ್ಯಕ್ಷ ಪರಶುರಾಮಖಂಡೂನವರ, ಉಪಾಧ್ಯಕ್ಷೆ ವೀಣಾಗುಡಿ, ಮಾಜಿಅಧ್ಯಕ್ಷರಾದಖುರ್ಷಿದ್‌ಅಹ್ಮದ್ ಹುಲ್ಲತ್ತಿ, ಮಮತಾಆರೆಗೊಪ್ಪ, ಮುಖಂಡರಾದರಾಜೂಗುಡಿ, ಶ್ರೀನಿವಾಸ ಭದ್ರಾವತಿ, ಸುರೇಶ ನಾಗಣ್ಣನವರ, ಉಮೇಶ ಮಾಳಗಿ ಸೇರಿದಂತೆಅನೇಕರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 