ಜನರ ಪಾಲ್ಗೊಳ್ಳುವಿಕೆಯಿಂದ ಪಂಚಾಯಿತಿ ವ್ಯವಸ್ಥೆಗೆ ಬಲ: ಶಾಸಕ ರಾಜುಗೌಡ
ದೇವರಹಿಪ್ಪರಗಿ 24: ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಜನರ ಗ್ರಾಮ ಪಂಚಾಯಿತಿಯ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಅಂದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಲು ಸಾಧ್ಯವಾಗುತ್ತದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.
ತಾಲೂಕಿನ ಕೋರವಾರ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ವಿಜಯಪುರ, ತಾ.ಪಂ ದೇವರಹಿಪ್ಪರಗಿ ಇವರ ಸಹಯೋಗದಲ್ಲಿ ಕೋರವಾರ ಗ್ರಾಮದಲ್ಲಿ ಸೋಮವಾರದಂದು ನಡೆದ ಸನ್.2022-23ನೇ ಸಾಲಿನ ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ ನಿರ್ಮಿಸಿದ
ನೂತನವಾಗಿ ನಿರ್ಮಾಣಗೊಂಡ ಗ್ರಾಮ ಪಂಚಾಯತ ಹಾಗೂ ಅಂಗನವಾಡಿ ಕಟ್ಟಡಗಳನ್ನು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಉದ್ಘಾಟಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಹಂತ ಹಂತವಾಗಿ ಮಾಡಲಾಗುತ್ತಿದ್ದು, ಗ್ರಾಮದಲ್ಲಿ ಇಂದು ಪ್ರಗತಿ ಕಾಲೋನಿಗಳಲ್ಲಿ ಸುಮಾರು 50ಲಕ್ಷ ರೂ ವೆಚ್ಚದ ಸಿ.ಸಿ ರಸ್ತೆ ಹಾಗೂ 5ಲಕ್ಷ ರೂ ವೆಚ್ಚದ ಹನುಮಾನ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಮುಂದಿನ ದಿನಗಳಲ್ಲಿ ಗ್ರಾಮದ ಅಭಿವೃದ್ಧಿಗೆ ಸರ್ಕಾರದ ವಿವಿಧ ಇಲಾಖೆಯ ಅನುದಾನ ತಂದು ಇನ್ನಷ್ಟು ಅಭಿವೃದ್ಧಿ ಪಡಿಸಲಾಗುವುದು ಹಾಗೂ ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಸಿ.ಸಿ ರಸ್ತೆ ನಿರ್ಮಾಣ, ದೇವಸ್ಥಾನಗಳ ಜೀರ್ಣೋದ್ಧಾರ, ಸಮುದಾಯ ಭವನಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತಿದ್ದು, ಕ್ಷೇತ್ರದ ಸಂಪೂರ್ಣ ಅಭಿವೃದ್ದಿಯೇ ನನ್ನ ಬದ್ಧತೆ. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ’ ಎಂದು ಹೇಳಿದರು.
ನಂತರ ಗ್ರಾಮದ ಪ್ರಮುಖರಿಂದ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಮನವಿ ಸಲ್ಲಿಸಿದರು.
ಗ್ರಾಮಸ್ಥರು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಕೋರವಾರ ಗ್ರಾಮವನ್ನು ಹೋಬಳಿ ಕೇಂದ್ರವಾಗಿಸಲು ಬೇಕಾಗುವ ಪ್ರಸ್ತಾವನೆಯನ್ನು ಸರ್ಕಾರದ ಮಟ್ಟದಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಸಚಿವರನ್ನು ಭೇಟಿ ಮಾಡಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕರು ಭರವಸೆ ನೀಡಿದರು.
ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ಸೈನಾಜಬಿ ರಫೀಕ ಬ್ಯಾಕೋಡ ವಹಿಸಿದ್ದರು. ದಿವ್ಯ ಸಾನಿಧ್ಯವನ್ನು ಸ್ಥಳೀಯ ಚೌಕಿ ಮಠದ ಕಾಶಿಲಿಂಗ ಮಹಾ ಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು.
ಪ್ರಾಸ್ತಾವಿಕವಾಗಿ ಪಿಡಿಒ ಎಸ್.ಎಸ್.ಗಣಾಚಾರಿ ಅವರು ಮಾತನಾಡಿ, ನೂತನ ಗ್ರಾಮ ಪಂಚಾಯಿತಿ ಕಟ್ಟಡದ ನಿರ್ಮಾಣಕ್ಕೆ ಶ್ರಮಿಸಿದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರ ಬಗ್ಗೆ ಮಾತನಾಡಿ ಕಟ್ಟಡದ ಸುತ್ತಲೂ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ ನೀಡಲು ಶಾಸಕರಿಗೆ ಗ್ರಾಮಸ್ಥರು ಪರವಾಗಿ ಮನವಿ ಮಾಡಿದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕೆ.ಎಸ್.ಕಡಕಬಾವಿ, ಸಿಂದಗಿ ಜಿ.ಪಂ ಎಇಇ ಜಿ.ವೈ. ಮುರಾಳ, ಸಿಂದಗಿ ಸಿಡಿಪಿಒ ಎಸ್.ಎನ್.ಹಿರೇಮಠ, ಉಪಾಧ್ಯಕ್ಷ ಮಹಾದೇವಪ್ಪ ರಾಮನಳ್ಳಿ, ಅಭಿಯಂತರ ಎಂ.ಎ.ಮಾರಡಗಿ, ಲ್ಯಾಂಡ್ ಆರ್ಮಿ ಎಒ ಪ್ರಫುಲಕುಮಾರ ಕ್ಯಾತನ್ ಸೇರಿದಂತೆ ಗ್ರಾಮದ ಪ್ರಮುಖರು, ಗಣ್ಯರು, ಗ್ರಾ.ಪ ಸರ್ವ ಸದಸ್ಯರು, ಸಿಬ್ಬಂದಿ ವರ್ಗ ಹಾಗೂ ಇತರರು ಉಪಸ್ಥಿತರಿದ್ದರು. ನಿರೂಪಣೆ ಮತ್ತು ಸ್ವಾಗತ ಅರುಣಕುಮಾರ ನೆರವೇರಿಸಿದರು.