ರಸ್ತೆ ಕಾಮಗಾರಿಗೆ ಪೂಜೆ ಸಲ್ಲಿಸಿ ಜನಪ್ರತಿನಿಧಿಗಳಿಂದ ಚಾಲನೆ
People's representatives perform puja and launch road works
ಬೆಳಗಾವಿ 07: ಬೆಳಗಾವಿ ಗ್ರಾಮೀಣ ಕ್ಷೇತ್ರದ ಫ್ರೀಡಂ ಫೈಟರ್ಸ್ ಕಾಲೋನಿಯಲ್ಲಿ 1.20 ಕೋಟಿ ರೂ. ವೆಚ್ಚದ ರಸ್ತೆ ಮತ್ತು ಫೇವರ್ಸ್ ಅಳವಡಿಕೆಯ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದಾಗಿ ಅನುದಾನ ಬಿಡುಗಡೆಯಾಗಿದ್ದು, ಕ್ಷೇತ್ರದ ಜನರ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡುವುದು ನನ್ನ ಸಂಕಲ್ಪವಾಗಿದ್ದು ಈ ನಿಟ್ಟಿನಲ್ಲಿ ಸುಸಜ್ಜಿತ ರಸ್ತೆಗಳ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಈ ವೇಳೆ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು, ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 