ವ್ಯಸನ ಮುಕ್ತ ದಿನಾಚರಣೆಯುವ ಜನತೆ ದುಶ್ಚಟಗಳಿಗೆ ಬಲಿಯಾಗದಿರಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
People celebrating Addiction-Free Day should not fall prey to addictions - Additional District Magi
ವ್ಯಸನ ಮುಕ್ತ ದಿನಾಚರಣೆಯುವ ಜನತೆ ದುಶ್ಚಟಗಳಿಗೆ ಬಲಿಯಾಗದಿರಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ಕೊಪ್ಪಳ 01: ಇಂದಿನ ದಿನಮಾನಗಳಲ್ಲಿ ಯುವಜನತೆ ಹಲವಾರು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಹಾಗಾಗಿ ಯುವಜನರು ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಶುಕ್ರವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ತರಬೇತಿ ಕೇಂದ್ರ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇವರ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಡಾ. ಮಹಾಂತ ಶಿವಯೋಗಿಗಳು ಮಾದಕ ವಸ್ತುಗಳ ವಿರೋಧದ ಬಗ್ಗೆ ದೇಶಾದ್ಯಂತ ಜಾಗೃತಿಯನ್ನುಂಟು ಮಾಡಿದ್ದರು. ಅವರು ಜೋಳಿಗೆ ಯಾತ್ರೆಯನ್ನು ಕೈಗೊಂಡು ಜನ ಸಮುದಾಯದ ಮುಂದೆ ಹೋಗಿ, ನಿಮ್ಮಲ್ಲಿ ಯಾವುದೇ ದುಶ್ಚಟಗಳಿದ್ದರೆ, ಅವುಗಳನ್ನು ನನ್ನ ಜೋಳಿಗೆಯಲ್ಲಿ ಹಾಕಿ ಉತ್ತಮ ವ್ಯಕ್ತಗಳಾಗಿ ಬಾಳಬೇಕೆಂದು ಸಮಾಜಕ್ಕೆ ಸಂದೇಶವನ್ನು ನೀಡಿದ್ದರು. ಅಸಂಖ್ಯಾತ ಜನರ ದುಶ್ಚಟಗಳನ್ನು ದೂರ ಮಾಡುವ ಮೂಲಕ ಡಾ.ಮಹಾಂತ ಶಿವಯೋಗಿಗಳು ವ್ಯಸನಮುಕ್ತ ಆಂದೋಲನದ ಹರಿಕಾರರಾಗಿದ್ದಾರೆ. ಅವರ ಸ್ಮರಣಾರ್ಥವಾಗಿ ಇಂದು ವ್ಯಸನ ಮುಕ್ತ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ಯುವ ಜನರನ್ನು ಮದ್ಯಪಾನ ಮತ್ತು ಮಾದಕ ಪದಾರ್ಥಗಳಿಂದ ವಿಮೋಚನೆಗೊಳಿಸುವುದು ರಾಷ್ಟ್ರದ ಮೂಲ ಜಾವಾಬ್ದಾರಿಯಾಗಿದೆ ಎಂದು ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು 47ನೇ ಆರ್ಟಿಕಲ್‌ನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ತಮಗೆ ಅಧಿಕಾರ ಸಿಕ್ಕಿದ್ದರೆ ಈ ದೇಶದಲ್ಲಿ ಮದ್ಯಪಾನವನ್ನು ನಿಷೇಧಿಸುವುದಾಗಿ ರಾಷ್ಟ್ರಪಿ ಮಹಾತ್ಮ ಗಾಂಧೀಜಿಯವರು ಹೇಳಿದ್ದರು. ನಾವೆಲ್ಲರೂ ವೈಯಕ್ತಿಕವಾಗಿ ದುಶ್ಚಟಗಳಿಂದ ದೂರವಿರೋಣ. ನಂತರ ನಮ್ಮ ಸುತ್ತಲಿನ ಜನರನ್ನು ದುಶ್ಚಟಗಳಿಂದ ದೂರವಿಡಲು ಶ್ರಮಿಶೋಣ ಎಂದು ಹೇಳಿದರು.
ಕೊಪ್ಪಳ ಜಿಲ್ಲಾಸ್ಪತ್ರೆಯ ಮನೋವೈದ್ಯರಾದ ಡಾ. ಲಕ್ಷ್ಮೀದೇವಿ ಪಾಟೀಲ್ ಅವರು ಮಾತನಾಡಿ, ದುಶ್ಚಟಗಳಿಂದ ಮನಸ್ಸು ವಿಕೃತಿಗೊಂಡು ಅಪರಾಧಿಕ ಕೃತ್ಯಗಳಿಗೆ ಪ್ರೇರೇಪಿಸುತ್ತದೆ ಎಂದು ಹೇಳಿದರು.ಪ್ರತಿಜ್ಞಾವಿಧಿ: ವ್ಯಸನ ಮುಕ್ತ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರಿಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ ಅವರು ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟಪ್ಪನವರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಡಾ. ಜಿ.ಸುರೇಶ, ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಪುಷ್ಪಲತಾ, ಕೊಪ್ಪಳ ಜಿಲ್ಲಾ ಮಾನಸಿಕ ಕಾರ್ಮಕ್ರಮ ಅನುಷ್ಠಾನಾಧಿಕಾರಿ ಡಾ. ಪ್ರಕಾಶ ಹೆಚ್., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಬಸವರಾಜ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಹಾಗೂ ಭಾಗ್ಯನಗರದ ಜ್ಞಾನಬಂಧು ಪಿಯು ಕಾಲೇಜು, ನವಚೇತನ ಪಿಯು ಕಾಲೇಜು, ಕಿಡದಾಳನ ಶಾರದ ಇಂಟರ್ ನ್ಯಾಷ್ನಲ್ ಶಾಲೆಯ ಮಕ್ಕಳು, ಕೊಪ್ಪಳದ ಕಿಮ್ಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವಾರ್ತಾ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 