ರಾಯಬಾಗ 02: ಧಾರವಾಡ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಇತ್ತಿಚೆಗೆ ನಡೆದ ಪದವಿ-ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಟೈಕ್ವಾಂಡೋ ಕ್ರೀಡಾಕೂಟದಲ್ಲಿ ಸ್ಥಳೀಯ ಕೆ.ಎಲ್.ಇ. ಸಂಸ್ಥೆಯ ಮಲಗೌಡ ಪಾಟೀಲ ಪ.ಪೂ ಕಾಲೇಜಿನ ವಿದ್ಯಾಥರ್ಿಗಳಾದ ಪ್ರತಿಕ ಗೊಂಡೆ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಹಾಗೂ ಶಿವಾನಂದ ತೇಲಿ ಬೆಳ್ಳಿಯ ಪದಕದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೈದ ವಿದ್ಯಾಥರ್ಿಗಳನ್ನು ಕಾಲೇಜಿನ ಪ್ರಾಚಾರ್ಯ ರುಪೇಶ ಪಾಟೀಲ, ಸಿಬ್ಬಂದಿ ಹಾಗೂ ಸ್ಥಾನಿಕ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ. ಕಾಲೇಜಿನ ದೈಹಿಕ ನಿದರ್ೇಶಕ ಶಿವಾನಂದ ಖವಟಕೊಪ್ಪ ಈ ವಿದ್ಯಾಥರ್ಿಗಳಿಗೆ ತರಬೇತಿಯನ್ನು ನೀಡಿದ್ದರು.