ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿ ಕಾರ್ಯಕ್ರಮ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

Performance of female students in State Level Pre-Graduate Colleges Culture Program Competition

ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿ ಕಾರ್ಯಕ್ರಮ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ಬಳ್ಳಾರಿ 10: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃಧ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ತುಮಕುರು ಹಾಗೂ ತುಮಕೂರು ಜಿಲ್ಲಾ ಪ್ರಾಚಾರ್ಯರ ಸಂಘ ಇವರ ಸಹಯೋಗದಲ್ಲಿ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಬಳ್ಳಾರಿಯ ಅಲ್ಲೀಪುರ(ಕೊಳಗಲ್ಲು)ದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನದ ವಿಭಾಗದ ವಿದ್ಯಾರ್ಥಿನಿ ಎಸ್‌.ಮಹಾಲಕ್ಷ್ಮಿ ಅವರು ಚರ್ಚಾ ಸ್ಪರ್ಧೆ ವಿಭಾಗದಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದಿದ್ದಾರೆ. 

ಏಕಪಾತ್ರ ಅಭಿನಯ ಸ್ಪರ್ಧೆ ವಿಭಾಗದಲ್ಲಿ ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಧರಣಿ.ವಿ ಅವರು ತೃತೀಯ ಸ್ಥಾನದ ಜೊತೆಗೆ ಪ್ರಶಸ್ತಿ ಪತ್ರ ಹಾಗೂ ರೂ.6000 ನಗದು ಬಹುಮಾನ ಪಡೆದುಕೊಂಡಿದ್ದಾರೆ.ವಿದ್ಯಾರ್ಥಿನಿಯರು  ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಹಾಗೂ ಬಳ್ಳಾರಿ ಜಿಲ್ಲೆಗೆ ಕೀರ್ತಿ ತಂದಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.