ವ್ಯಕ್ತಿ ನಾಪತ್ತೆ - ಪತ್ತೆಗೆ ಮನವಿ
Person Missing- appeal to find
ಬಳ್ಳಾರಿ 13: ನಗರದ ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ವಟ್ಟಪ್ಪಗೇರಿಯ ನಿವಾಸಿ ಯೇಸುದಾಸ್ ಎನ್ನುವ 43 ವರ್ಷದ ವ್ಯಕ್ತಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದ್ದು, ಪತ್ತೆಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.ಘಟನೆಯ ವಿವರ:
ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಜ್ಯೋತಿ ಎಂಬುವವರ ಪತಿ ಯೇಸುದಾಸ್ ಎಂಬುವವರು 2022ರ ಜ.02 ರಿಂದ ನಾಪತ್ತೆಯಾಗಿದ್ದಾರೆ. ದೂರಿನ ಅನ್ವಯ ತಾವು ಸಾಲ ಮಾಡಿಕೊಂಡಿರುವುದಾಗಿಯೂ ಮತ್ತು ಸಾಲಗಾರರು ಹಣ ಮರಳಿಸುವಂತೆ ಕೇಳುತ್ತಿದ್ದಾರೆ ಎಂದು ಪತ್ನಿಗೆ ತಿಳಿಸಿದ್ದರು. ಅಂದಿನಿಂದ ಅವರು ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ.ವ್ಯಕ್ತಿಯ ಚಹರೆ ಗುರುತು: ಎತ್ತರ ಸುಮಾರು 5.6 ಅಡಿ, ದುಂಡು ಮುಖ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೆಇಬಿ ಲೈನ್ ಮ್ಯಾನ್ ಕೆಲಸ ಮಾಡುತ್ತಿರುತ್ತಾನೆ. ಮನೆಯಿಂದ ಹೊರಡುವಾಗ ಯಾವ ಬಟ್ಟೆ ಧರಿಸಿದ್ದನು ಎಂಬ ಮಾಹಿತಿ ಲಭ್ಯವಿಲ್ಲ.ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆ ದೂ.08392-240731, 244145, ಬಳ್ಳಾರಿ ಕಂಟ್ರೋಲ್ ರೂಂ 08392-258100, ಕೌಲ್ ಬಜಾರ್ ಠಾಣೆ ಪಿಐ ಮೊ.9480803047, ಪಿ.ಎಸ್.ಐ 94808203084, 9480803085 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 