ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗಲೇ ವ್ಯಕ್ತಿತ್ವ ವಿಕಸನ ಸಾಧ್ಯ
Personality development is possible only when students are involved in cultural activities
ವಿಜಯಪುರ 16: ಯುವಜನೋತ್ಸವವು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ಮಹತ್ವದ ವೇದಿಕೆಯಾಗಿದೆ. ಪಠ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗಲೇ ಸಂಪೂರ್ಣ ವ್ಯಕ್ತಿತ್ವ ವಿಕಸನ ಸಾಧ್ಯ ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಗುರುತಿಸಿ ಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗುವಂತೆ ಶ್ರಮಿಸಬೇಕೆಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ಮುಧೋಳ ಬಿವ್ಹಿವ್ಹಿಎಸ್ ಕ್ಯಾಂಪಸ್‌ನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕ.ರಾ.ಅ.ಮ.ವಿ.ವಿ. ವಿಜಯಪುರ ಹಾಗೂ ಬಾಗಲಕೋಟ ಬಿವ್ಹಿವ್ಹಿ ಸಂಘದ ದಾನಮ್ಮದೇವಿ ಮಹಿಳಾ ಮಹಾವಿದ್ಯಾಲಯ ಮುಧೋಳ ಇವರ ಸಹಯೋಗದಲ್ಲಿ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಮೂರು ದಿನಗಳ ಯುವಜನೋತ್ಸವ 2025-26ರ 20ನೇ ಶಕ್ತಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಯುವಜನೋತ್ಸವ ದಂತಹ ಕಾರ್ಯಕ್ರಮಗಳು ವಿದ್ಯಾರ್ಥಿನಿಯರ ಆತ್ಮವಿಶ್ವಾಸ, ನಾಯಕತ್ವ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತವೆ. ತೀರ್ುಗಾರರು ನಿಜವಾದ ಪ್ರತಿಭೆಗಳನ್ನು ಗುರುತಿಸಿ ಪ್ರೊತ್ಸಾಹ ನೀಡಬೇಕು, ವಿದ್ಯಾರ್ಥಿಗಳಿಗೆ ಜ್ಞಾನ ಹಾಗೂ ಮನರಂಜನೆಯ ಸಮತೋಲನ ಒದಗಿಸುವಂತ ಕೆಲಸವಾಗಬೇಕು ಎಂದರು.
ಕರ್ನಾಟಕ ರಾಜ್ಯದ ವಿವಿಧ ಭಾಗಗಳಿಂದ 25ಕ್ಕೂ ಹೆಚ್ಚು ಮಹಾವಿದ್ಯಾಲಯಗಳಿಂದ 1200 ಕ್ಕೂ ಅಧಿಕ ವಿದ್ಯಾರ್ಥಿನಿಯರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಹೆಸರನ್ನು ನೊಂದಣಿಯನ್ನು ಮಾಡಿಕೊಂಡಿರುತ್ತಾರೆ ಹಾಗೂ ಈ ಸ್ಫರ್ಧೆಗಳನ್ನು ಆಯೋಜಿಸಲು ವಿಶ್ವವಿದ್ಯಾಲಯದ ತಾಂತ್ರಿಕ ಸಮಿತಿ ತಂಡ, ವಿವಿಧ ಸ್ಪರ್ಧೆಗಳ ನಿರ್ಣಾಯಕರಾಗಿ 20 ಅನುಭವಿಕರು ಹಾಗೂ ಮಹಾವಿದ್ಯಾಲಯ ದ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ಸ್ವಯಂಸೇವಕರಾಗಿ ಭಾಗವಹಿಸಿದ್ದಾರೆ, ಒಟ್ಟು ನಾಲ್ಕು ಮುಖ್ಯವೇಧಿಕೆಗಳಲ್ಲಿ ವಿದ್ಯಾರ್ಥಿನಿಯರು ತಮ್ಮ ಕಲೆ, ಸಾಹಿತ್ಯ, ನಾಟಕ, ಸಂಗೀತ ಹಾಗೂ ನೃತ್ಯಕ್ಕೆ ಸಂಬಂಧಿಸಿದ ಸ್ಪರ್ಧೆಗಳು ನಡೆಯಲಿವೆ ಎಂದು ಹೇಳಿದ ಅವರು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ''ಶಕ್ತಿ ಸಂಭ್ರಮ'' ಎಂಬ ಹೆಸರಿನಲ್ಲಿ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಯುವಜನೋತ್ಸವಗಳನ್ನು ಆಯೋಜಿಸುತ್ತಾ ಬಂದಿದೆ, ಇದು ಅಕ್ಕಮಹಾದೇವಿಯ ಆದರ್ಶಗಳನ್ನು ಪಾಲಿಸುವಂತೆ ಮತ್ತು ಮಹಿಳೆಯರ ಸಬಲೀಕರಣಕ್ಕೆ ಪ್ರೇರಣೆ ನೀಡುತ್ತದಲ್ಲದೆ ಇವು ಕೇವಲ ಮನರಂಜನಾ ಕಾರ್ಯಕ್ರಮಗಳಲ್ಲ, ಬದಲಿಗೆ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಪ್ರದರ್ಶಿಸುವ ವೇದಿಕೆಗಳಾಗಿವೆ, ವಿದ್ಯಾರ್ಥಿನಿಯರು ಈ ವೇದಿಕೆಯನ್ನು ಸಮರ್ಕವಾಗಿ ಬಳಸಿಕೊಂಡು ತಮ್ಮಲ್ಲಿರುವ ಕಲಾ ಪ್ರತಿಭೆಯನ್ನು ತೋರಿಸಬೇಕೆಂದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ವಿಶ್ರಾಂತ ಕುಲಪತಿ ಹಾಗೂ ಬಿವ್ಹಿವ್ಹಿ ಸಂಘದ ಮುಖ್ಯ ಸಲಹೆಗಾರ್ತಿ ಪ್ರೊ.ಮೀನಾ ಚಂದಾವರಕರ ಮುಖ್ಯ ಅತಿಥಿ ಸ್ಥಾನವಹಿಸಿ ಮಾತನಾಡಿ, ಇಂದಿನ ಒತ್ತಡದ ಜೀವನ ದಲ್ಲಿ ಉಲ್ಹಾಸದಿಂದ ಇರಬೇಕಾದರೆ ವಿದ್ಯಾರ್ಥಿನಿಯರು ತಮ್ಮ ಕಲಿಕೆಯ ಜೊತೆಗೆ ವಿವಿಧ ಸ್ಪರ್ದೆಗಳಲ್ಲಿ ಭಾಗವಹಿಸಿ ಆನಂದಿಸಬೇಕು, ಸೃಜನಾತ್ಮಕ ಕೌಶಲ್ಯಾಧಾರಿತ ಕಲೆಯನ್ನು ಬೆಳಸಿ ಕೊಳ್ಳಬೇಕೆಂದು ಹೇಳಿ, ವಿ.ವಿ.ವ್ಯಾಪ್ತಿಯ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳು ಇಂತಹ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಅವರನ್ನು ಪ್ರೇರಿಪಿಸಬೇಕೆಂದರು.
ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಸ್ವರಚಿತ ಕವನ ವಾಚನ ಮಾಡುವ ಮೂಲಕ ವಿಧ್ಯಾರ್ಥಿನಿಯರ ಕ್ಷೇಮಾಭಿವೃದ್ದಿಗೆ ವಿ.ವಿ.ಕೊಡುಗೆಯನ್ನು ವಿವರಿಸಿದರು. ಬಾಗಲಕೋಟ ಬಿವ್ಹಿವ್ಹಿ ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಎಸ್. ಸೂಳಿಭಾವಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿವ್ಹಿವ್ಹಿ ಸಂಘದ ವ್ಯಾಪ್ತಿಯಲ್ಲಿ 184 ಅಂಗ ಸಂಸ್ಥೆ ಗಳಿವೆ, ಯುಜಿ ಟು ಪಿಜಿ ಗಳಲ್ಲದೆ ಇಂಜನೀಯರಿಂಗ್, ಮೆಡಿಕಲ್, ಬಿಬಿಎ, ಎಂಬಿಎ ಸೇರಿದಂತೆ ವಿವಿಧ ತರಬೇತಿ ಕೇಂದ್ರಗಳ ಮೂಲಕ 50ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತದೆ, 35 ಹಾಸ್ಟೇಲ್, 200 ಸ್ಕೂಲ್ ಬಸ್, 6ಸಾವಿರ ಶಿಕ್ಷಕರು ಇದ್ದಾರೆ ಒಟ್ಟಾರೆ ವಿ.ವಿ. ಮಾಡುವ ಕೆಲಸವನ್ನು ಬಿವ್ಹಿವ್ಹಿ ಸಂಘ ಮಾಡುತ್ತಿರುವುದು ಹೆಮ್ಮೆಯ ಸಂಗತಿ, ಈ ಸಂಘ ಇಷ್ಟೊಂದು ಎತ್ತರಕ್ಕೆ ಬೆಳೆಯಲು ಸಹಾಯ ಸಹಕಾರ ಮಾಡಿದವರನ್ನು ಸ್ಮರಿಸಿದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶಕಿ ಪ್ರೊ. ಜ್ಯೋತಿ ಉಪಾಧ್ಯೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ವಿವಿ ಶಿಕ್ಷಣ ನಿಕಾಯದ ಡೀನ್ ಪ್ರೊ.ಸಕ್ಪಾಲ್ ಹೂವಣ್ಣ ಸಂದೇಶ ವಾಚನ ಮಾಡಿದರು. ದಾನಮ್ಮದೇವಿ ಮಹಿಳಾ ಕಾಲೇಜಿನ ಪ್ರಾಚಾರ್ಯ ಪ್ರೊ.ಎಮ್.ಎಮ್. ಹಿರೇಮಠ ಸ್ವಾಗತಿಸಿದರು, ಪ್ರೊ.ಎ.ಎನ್.ಬಾಗೇವಾಡಿ ಅತಿಥಿಗಳನ್ನು ಪರಿಚಯಿಸಿದರು, ಮಲ್ಲಿಕಾರ್ಜುನ ಎಂ ಮತ್ತು ಪ್ರೊ.ಎ.ಸಿ.ಕೆರೂರ ನಿರೂಪಿಸಿದರು, ಪ್ರೊ.ಎಸ್.ಬಿ.ಕಬ್ಬಿಣದ ವಂದಿಸಿದರು, ಅಕ್ಷತಾ ಹಾಗೂ ದೀಪಾ ಸಂಗಡಿಗರು ಪ್ರಾರ್ಥನೆ ಹೇಳಿದರು, ಸುರೇಖಾ ದಳವಾಯಿ ಹಾಗೂ ಸಂಗಡಿಗರು ಮಹಿಳಾ ಗೀತೆ ಹೇಳಿದರು. ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿನಿಯರ ಆಕರ್ಷಕ ಕಲಾತಂಡವು ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 