ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

Petition for tracing the heirs of an anonymous deceased person

ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ 

ಬಳ್ಳಾರಿ 31: ನಗರದ ವಡ್ಡರಬಂಡಿ ರಸ್ತೆಯ ರಾಧಿಕಾ ಲಾಡ್ಜ್‌ನ ಮುಂಭಾಗ ಸುಮಾರು 40-45 ವರ್ಷದ  ಅನಾಮಧೇಯ ವ್ಯಕ್ತಿಯು ಅಸ್ವಸ್ಥರಾಗಿ, ಯಾವುದೋ ಖಾಯಿಲೆಯಿಂದ  ಜ.31 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ. 

ಚಹರೆ: ಅಂದಾಜು 5.5 ಅಡಿ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಅಗಲವಾದ ಮುಖ, ತಲೆಯ ಮೇಲೆ ಕಪ್ಪು ಕೂದಲು ಹಾಗೂ ಮುಖದಲ್ಲಿ ಕಪ್ಪು ಮೀಸೆ ಹೊಂದಿರುತ್ತಾರೆ. ಕಪ್ಪು ಮತ್ತು ಕೆಂಪು ಮಿಶ್ರಿತ ಟೀ-ಶರ್ಟ್‌, ನೀಲಿ ಬಣ್ಣದ ಜೀನ್ಸ್‌ ಪ್ಯಾಂಟ್ ಧರಿಸುತ್ತಾರೆ. 

ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಎಸ್‌ಐ ಮೊ.9480803081, ಪಿಐ ಮೊ.9480803045 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.