ದೈಹಿಕ ಶಿಕ್ಷಕ ರಾವೂತ ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆ
ತಾಳಿಕೋಟೆ, 10; ಪಟ್ಟಣದ ನಿವಾಸಿ ಮಿಣಜಗಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾವತ ಪೂಜೇರಿ ಅವರು ವಿಜಯಪುರ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು. ವಿಜಯಪುರ ಜಿಲ್ಲಾ ಡಾ.ಬಿ ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭಾನುವಾರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.