ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ: ದೈಹಿಕ ಶಿಕ್ಷಕ ಆರೋಪಿ ಬಂಧನ
Physical education teacher arrested for sexually assaulting minor student
ಮುಂಡಗೋಡ 25: ತಾಲೂಕಿನ ಖಾಸಗಿ ಲೊಯೋಲಾ ಪ್ರೌಢಶಾಲೆಯ ಕಿರಣ್ ಟೋಪೋಜಿ ಎಂಬುವ ದೈಹಿಕ ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪದ ಹಿನ್ನೆಲೆ ವಿದ್ಯಾರ್ಥಿನಿಯ ಕುಟುಂಬದವರು ಇಲ್ಲಿನ ಪೊಲೀಸ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ತಾಲೂಕಿನ ಮುಡಸಾಲಿ ಗ್ರಾಮದ ಕಿರಣ ಟೋಪೋಜಿ ಎಂಬಾತನೇ ಆರೋಪಿತ ಕಳೆದ 2 ವರ್ಷಗಳಿಂದ ಅಪ್ರಾಪ್ತ ಯುವತಿಯೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದ್ದು, ಈತನು ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ಹೋಗಿ ಆಗಾಗ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು. ಈ ವಿಷಯ ಯಾರಿಗಾದರೂ ಹೇಳಿದರೆ ಜೀವ ತೆಗೆಯುವ ಜೀವ ಬೇದರಿಕೆ ಹಾಕಿದ್ದನು ಎಂದು ಅಪ್ರಾಪ್ತ ಕುಟುಂಬದವರು ಇಲ್ಲಿನ ಪೊಲೀಸ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಫೋಕೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 