ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಿಂದ ಶಾರೀರಿಕ ಸದೃಢತೆ ಸಾದ್ಯ: ಎಸ್‌ಪಿ ಗುಳೇದ
Physical fitness can be achieved through cultural and sports activities: SP Guleda
ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಿಂದ ಶಾರೀರಿಕ ಸದೃಢತೆ ಸಾದ್ಯ: ಎಸ್‌ಪಿ ಗುಳೇದ
ಬೆಳಗಾವಿ 31: ವಿದ್ಯಾರ್ಥಿಗಳು ಒಟ್ಟೂಗೂಡಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾನಸಿಕ ಹಾಗೂ ಶಾರೀರಿಕ ಸದೃಢ ಸ್ಥಿತಿಯನ್ನು ಹೊಂದಲು ಸಾದ್ಯವೆಂದು ಬೆಳಗಾವಿ ಜಿಲ್ಲೆಯ ಪೋಲಿಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಅವರು ತಿಳಿಸಿದರು.
ಅವರು ಇಂದು ಗೋಗಟೆ ಪದವಿ ಪೂರ್ವ ಮಹಾವಿದ್ಯಾಲಯದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಂಬಿಕೆ, ನಿರಂತರ ಕಲಿಕೆ, ನಿರಂತರ ಪರಿಶ್ರಮದಿಂದ ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಲು ಸಾದ್ಯವೆಂದು ತಿಳಿಸಿದರು. ಇಂದಿನ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯುತ್ತಿದ್ದು ಮೊಬೈಲ್ ಬಳಕೆಯನ್ನು ಮತ್ತು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸುವಾಗ ಅತ್ಯಂತ ಎಚ್ಚರಿಕೆಯಿಂದ ಮನೆಯ ಹಿರಿಯರ ಮಾರ್ಗದರ್ಶನದಲ್ಲಿ ಅನುಕೂಲಕರ ರೀತಿಯಲ್ಲಿ ಉಪಯೋಗಿಸುವ ಕುರಿತು ಕಿವಿಮಾತು ಹೇಳಿದರು.
ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಚೇರಮನ್ನ ವಿ ಎಮ್ ದೇಶಪಾಂಡೆಯವರು ಮಾತನಾಡಿ ವಿದ್ಯಾರ್ಥಿಗಳು ಕಾಲೇಜಿನ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಿ ಕಾಲೇಜಿಗೆ ಹಾಗೂ ತಂದೆ-ತಾಯಿಗಳಿಗೆ ಕೀರ್ತಿ ತರಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ 2025ರ ಸಾಧನಾ ಎಂಬ ಮ್ಯಾಗಜೀನ್ ಬಿಡುಗಡೆ ಮಾಡಲಾಯಿತು. ಪ್ರಾಚಾರ್ಯ ಡಾ. ಅಂಜನಾ ಕೇರೂರ ಸ್ವಾಗತಿಸಿದರು. ದೈಹಿಕ ಶಿಕ್ಷಕ ಡಾ. ಎ ಎಸ್ ಜಡೆ, ಕ್ರೀಡಾ ಚಟುವಟಿಕೆಗಳ ಅಧ್ಯಕ್ಷ ಭಾರತಿ ಹೆಗಡೆ, ಸಾಂಸ್ಕೃತಿಕ ಚಟುವಟಿಕೆಗಳ ಅಧ್ಯಕ್ಷ ಎಸ್ ಪಿ ಕುಲಕರ್ಣಿ ಕಾಲೇಜಿನ ಜನರಲ್ ಸೆಕ್ರೇಟರಿ ಇಶಾನ್ ಕರಗುಪ್ಪಿಕರ್ ಹಾಗೂ ವಿದ್ಯಾರ್ಥಿನಿ ಪ್ರತಿನಿಧಿ ನಿಧಿ ಕುಲಕರ್ಣಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 