ಪಯೋನಿಯರ್ ಶಾಲೆ ಅಕ್ಷರ ಗೊಂಡಬಾಳ ಜಿಲ್ಲಾಮಟ್ಟಕ್ಕೆ ಆಯ್ಕೆ
Pioneer School Akshara Gondabala selected for district level
ಕೊಪ್ಪಳ 24: ಇಲ್ಲಿನ ಭಾಗ್ಯನಗರದ ಪಯೋನಿಯರ್ ಪಬ್ಲಿಕ್ ಸ್ಕೂಲ್ 6 ನೇ ತರಗತಿಯ ವಿದ್ಯಾರ್ಥಿನಿ ಅಕ್ಷರ ಎಂ. ಗೊಂಡಬಾಳ ಅವರು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದ ತಾಲೂಕ ಮಟ್ಟದ 5 ರಿಂದ 7 ನೇ ತರಗತಿಯ ಭಕ್ತಿ ಗೀತೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ನಗರದ ಬಾಲಿಕೆಯರ ಸರಕಾರಿ ಪ್ರೌಢ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಬಾಲಿಕೆಯರ ಸರಕಾರಿ ಪ್ರೌಢ ಶಾಕೆ ಆಶ್ರಯದಲ್ಲಿ ಇಂದು ಜರುಗಿದ ತಾಲೂಕ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಸೇರಿ ಅನೇಕ ಅಧಿಕಾರಿಗಳು, ಶಿಕ್ಷಕರು ಬಹುಮಾನವನ್ನು ವಿತರಿಸಿದರು. ಜಿಲ್ಲಾಮಟ್ಟಕ್ಕೆ ಆಯ್ಜೆಯಾದ ವಿಜೇತ ಶಾಲೆಯ ವಿದ್ಯಾರ್ಥಿನಿ ಅಕ್ಷರ ಳನ್ನು ಶಾಲಾ ಆಡಳಿತ ಮಂಡಳಿ, ಆಡಳಿತಾಧಿಕಾರಿ ಉಮೇಶ ಕಿಲಾರಿ, ಮುಖ್ಯೋಪಾಧ್ಯಾಯ ಅಶ್ವಥ್, ಶಿಕ್ಷಕರು, ಸಂಗೀತ ಗುರು ಶ್ರೀಶೈಲ ಬಡಿಗೇರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 