ಪೋಷಣ್ ಮಾಸಾಚರಣೆ ಅಂಗವಾಗಿ ತಾಯಿ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ
Planting program in the name of mother as part of Poshan month celebrations
ಪೋಷಣ್ ಮಾಸಾಚರಣೆ ಅಂಗವಾಗಿ ತಾಯಿ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ
ಕೊಪ್ಪಳ 12: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಶುಕ್ರವಾರದಂದು ಕೊಪ್ಪಳ ಯೋಜನೆಯ ವದಗನಾಳ 1ನೇ ಅಂಗನವಾಡಿ ಕೇಂದ್ರದಲ್ಲಿ 8 ನೇ ರಾಷ್ಟ್ರೀಯ ಪೋಷಣ್ ಮಾಸಾಚರಣೆಯ ಅಂಗವಾಗಿ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು ಪ್ರತಿ ವರ್ಷ ಪೋಷಣ್ ಮಾಸಾಚರಣೆ ಕಾರ್ಯಕ್ರವನ್ನು ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಮಾಹೆವಾರು ಮಾಡುವರು. ಕಾರ್ಯಕ್ರಮದ ಉದ್ದೇಶ ಪೌಷ್ಠಿಕ ಆಹಾರ ಸೇವನೆ ಮುಖ್ಯ ಎಂಬುದರ ಕುರಿತು ಜಾಗೃತಿ ಮೂಡಿಸುವುದು. ದೇಹದ ಸರ್ವಾಂಗೀಣ ಅಭಿವೃದ್ಧಿಗೆ ಪೌಷ್ಟಿಕ ಆಹಾರ ಸೇವನೆ ತುಂಬಾ ಮುಖ್ಯ. ಆಹಾರದಲ್ಲಿ ವೈವಿಧ್ಯತೆ ಕಂಡುಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪರಶುರಾಮ ಶೆಟ್ಟೆಪ್ಪನವರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೋಟಗಾರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶಿವಶರಣಪ್ಪ ಗದ್ದಿ, ಶಾಲಾ ಮುಖ್ಯೋಪಾಧ್ಯಾಯರು, ಗ್ರಾಮ ಪಂಚಾಯತಿ ಸದಸ್ಯರು, ಗರ್ಭಿಣಿ, ಬಾಣಂತಿಯರು, ವಲಯದ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 