ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ
Pledge taken as part of National Voters' Day celebrations
ಕೊಪ್ಪಳ 23 : 16ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರ ನೇತೃತ್ವದಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ಭಾರತ ಚುನಾವಣಾ ಆಯೋಗದ ನನ್ನ ಭಾರತ ನನ್ನ ಮತ (ಭಾರತೀಯ ಪ್ರಜಾಪ್ರಭುತ್ವದ ಹೃದಯದಲ್ಲಿ ಭಾರತೀಯ ನಾಗರಿಕ) ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ ನೈತಿಕ ಮತ್ತು ಕಡ್ಡಾಯ ಮತದಾನದ ಮಹತ್ವದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಮಂಜುನಾಥ ಡಿ., ಡಿಡಿಪಿಐ ಸೋಮಶೇಖರಗೌಡ ಪಾಟೀಲ, ಸೇರಿದಂತೆ ಜಿಲ್ಲಾಡಳಿತ ಭವನದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 