ಶರಣ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷರಾಗಿ ಕವಿ ಟಿ.ಎಂ. ನಾಗಭೂಷಣ ಆಯ್ಕೆ
Poet T.M. Nagabhushan elected as president of Sharan Sahitya Parishad
ಹೂವಿನಹಡಗಲಿ 19: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷರಾಗಿ ಪಟ್ಟಣದ ಕವಿ ಟಿ. ಎಂ. ನಾಗಭೂಷಣರನ್ನು ಅವಿರೋಧ ಆಯ್ಕೆ ಮಾಡಲಾಯಿತು.ಪಟ್ಟಣದ ಗವಿಸಿದ್ದೇಶ್ವರ ಮಠದಲ್ಲಿ ಶನಿವಾರ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಯುವ ಘಟಕದ ಅಧ್ಯಕ್ಷರಾಗಿ ದಯಾನಂದ ಎಂ. ಕದಳಿ ವೇದಿಕೆ ಅಧ್ಯಕ್ಷರಾಗಿ ಡಾ. ಶೈಲಜ ಪವಾಡಶೆಟ್ರ ಆಯ್ಕೆಯಾದರು. ಸಾನಿಧ್ಯವನ್ನು ಗವಿಸಿದ್ದೇಶ್ವರ ಮಠದ ಡಾ. ಹಿರಿಶಾಂತವೀರ ಮಹಾಸ್ವಾಮಿಗಳು ವಹಿಸಿದ್ದರು. ಅಧ್ಯಕ್ಷತೆಯನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ವಿಜಯನಗರ ಜಿಲ್ಲಾಧ್ಯಕ್ಷರಾದ ಡಾ. ಕೆ. ರವೀಂದ್ರನಾಥ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಎನ್. ಎಂ. ರವಿಕುಮಾರ್, ಹರಪನಹಳ್ಳಿ ತಾಲೂಕಿನ ಅಧ್ಯಕ್ಷ ರಾಜಶೇಖರ ಬಣಕಾರ, ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ. ಎಂ. ಮಂಜುನಾಥಸ್ವಾಮಿಜಿ, ಹಿರಿಯ ಸಾಹಿತಿ ತೋ. ಮ. ಶಂಕ್ರಯ್ಯ, ಎಸ್. ದ್ವಾರಕೀಶ್ ರೆಡ್ಡಿ, ಪಿ. ಎಂ. ಕೊಟ್ರಸ್ವಾಮಿ, ಹೆಚ್. ಜಿ. ಪಾಟೀಲ್, ದಳವಾಯಿ ಹಾಲೇಶ, ಹೆಚ್. ಬಿ. ರಾಜಣ್ಣ, ಎಸ್. ಸುನೀತಾ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 