ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಅದ್ಧೂರಿ ತೆರೆ, ಪೊಲೀಸರು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಲಿ-ಪ್ರಿಯಾಂಗಾ ಎಂ
Police Annual Sports Meet to be held with grand opening, police should pay more attention to health
ಹುಬ್ಬಳ್ಳಿ 16: ಪೊಲೀಸರ ಕರ್ತವ್ಯಕ್ಕೆ ಸಮಯದ ಮಿತಿಯಿರುವುದಿಲ್ಲ. ಪೊಲೀಸರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಲು ಮುಂದಾಗಬೇಕು. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ. ಹೇಳಿದರು. ಇಂದು ಕಾರವಾರ ರಸ್ತೆಯ ಹಳೆಯ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಸರ್ಕಾರದ ಬೇರೆ ಬೇರೆ ಇಲಾಖೆಗಳಲ್ಲಿ ಕ್ರೀಡಾಕೂಟವನ್ನು ಆಯೋಜನೆ ಮಾಡುತ್ತಾರೆ. ಆದರೆ ಪೋಲಿಸ್ ಇಲಾಖೆಯಲ್ಲಿ ವಿಶೇಷ ಹಾಗೂ ವಿಶಿಷ್ಟ ರೀತಿಯಲ್ಲಿ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗುತ್ತದೆ. ಪೊಲೀಸರಿಗೆ ನಿಗದಿತ ಕೆಲಸದ ಸಮಯ, ವೇಳೆ ಇರುವುದಿಲ್ಲ. ಹಬ್ಬ ಹಾಗೂ ರಜಾ ದಿನಗಳಲ್ಲೂ ಸಹ ಪೊಲೀಸರು ಕಾರ್ಯನಿರ್ವಹಿಸುತ್ತಾರೆ. ಸಮಾಜದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುತ್ತಾರೆ. 1 ಲಕ್ಷ ಜನಸಂಖ್ಯೆಗೆ ಸುಮಾರು 200ಕ್ಕೂ ಅಧಿಕ ಪೊಲೀಸರು ಇರಬೇಕಾಗುತ್ತದೆ. ಆದರೆ ನಮ್ಮ ದೇಶದಲ್ಲಿ ಕಡಿಮೆ ಪೊಲೀಸರಿದ್ದಾರೆ. ರಾಜ್ಯದಲ್ಲಿ 1 ಲಕ್ಷ ಜನಸಂಖ್ಯೆಗೆ 142 ಪೊಲೀಸರು ಮಾತ್ರ ಇರುವರು. ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹುಮುಖ್ಯವಾಗಿರುತ್ತದೆ. ಪೊಲೀಸರ ಕೆಲಸ ಯಾರ ಕಣ್ಣಿಗೂ ಕಾಣುವುದಿಲ್ಲ. ಸಮಾಜದಲ್ಲಿ ಯಾವುದೇ ದುರ್ಘಟನೆಗಳು ಆಗದಂತೆ ಕೆಲಸ ನಿರ್ವಹಿಸುವರು ಎಂದು ಅವರು ತಿಳಿಸಿದರು.
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಮಾತನಾಡಿ, ಕಳೆದ ಎರಡು ದಿನಗಳಿಂದ ನಡೆದ ಕ್ರೀಡಾಕೂಟದಲ್ಲಿ ಪೊಲೀಸರು ಉತ್ಸಾಹದಿಂದ ಭಾಗವಹಿಸಿದ್ದಾರೆ. ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವರು. ಕ್ರೀಡಾ ಮನೋಭಾವವನ್ನು ಎಲ್ಲರೂ ಮೆರೆದಿದ್ದೀರಿ. ಸಿಎಆರ್ ತಂಡ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಪಡೆದಿರುವುದು ಸಂತಸ ತಂದಿದೆ. ಸಿಎಆರ್ ವಿಭಾಗ ಎಲ್ಲ ರೀತಿಯಲ್ಲಿ ನಿರಂತರವಾಗಿ ಸಿವಿಲ್ ಪೊಲೀಸರಿಗೆ ಸಹಾಯ ಮಾಡುತ್ತಾರೆ. ಅವರ ನಿರಂತರ ಕಾರ್ಯವನ್ನು ಮರೆಯುವಂತಿಲ್ಲ. ಕ್ರೀಡಾಕೂಟಕ್ಕಾಗಿ ಉತ್ತಮ ರೀತಿಯಲ್ಲಿ ತರಬೇತಿಯನ್ನು ಪಡೆದುಕೊಂಡಿರುತ್ತಾರೆ. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಕ್ರೀಡಾಕೂಟ ಆಯೋಜನೆ ಮಾಡಲಾಗುವುದು. ಪ್ರತಿ 3 ತಿಂಗಳಿಗೊಮ್ಮೆ ವಾಲಿಬಾಲ್, ಕ್ರಿಕೆಟ್ ಮತ್ತು ಕಬಡ್ಡಿ ಕ್ರೀಡೆಗಳನ್ನು ಆಯೋಜಿಸಲಾಗುವುದು ಎಂದರು.
ಸಿಎಆರ್ ವಿಭಾಗ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಜಯಿಸಿತು. ಪುರುಷರ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿಯನ್ನು ವೆಂಕಟೇಶ ನಾಯ್ಕ ಪಡೆದುಕೊಂಡರು. ಸುಶ್ಮೀತಾ ಪಾಟೀಲ ಅವರು ಮಹಿಳೆಯರ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಆರ್‌ಪಿಐ ಸಂತೋಷ ಬೋಜಪ್ಪನವರ ನೇತೃತ್ವದಲ್ಲಿ ಉತ್ತರ ವಿಭಾಗ, ದಕ???ಣ ವಿಭಾಗ, ಧಾರವಾಡ ವಿಭಾಗ, ಸಂಚಾರ ವಿಭಾಗ, ಮಹಿಳಾ ವಿಭಾಗ ಮತ್ತು ಸಿಎಆರ್ ವಿಭಾಗ ತಂಡಗಳು ಆಕರ್ಷಕ ನಿರ್ಗಮನ ಪಥ ಸಂಚಲನ ನಡೆಸಿದವು. ಎಡ್ವಿನ್ ಡಿಸೋಜ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್ ತಂಡ ಭಾಗವಹಿಸಿತ್ತು. ಡಿಸಿಪಿಗಳಾದ ಮಹಾನಿಂಗ ನಂದಗಾವಿ, ರವೀಶ ಸಿ.ಆರ್., ಎಸಿಪಿ ಪ್ರಶಾಂತ ಸಿದ್ದನಗೌಡರ ಸೇರಿದಂತೆ ಪೊಲೀಸ ಅಧಿಕಾರಿಗಳು, ಸಿಬ್ಬಂದಿ, ಕುಟುಂಬಸ್ಥರು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 