ಪೋಲಿಸ್ ಕಾನ್‌ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆ: ಡಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
Police Constable Written Exam: Strict Instructions to DC and Officials
ಲೋಕದರ್ಶನ ವರದಿ
ವಿಜಯಪುರ 27: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ವೃಂದದ ನಾಗರಿಕ (ಸಿವಿಲ್) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಶಿಸ್ತು ಬದ್ದವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ವಿ.ಬಿ.ದರಬಾರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಒಟ್ಟು 61 ಪರೀಕ್ಷಾ ಕೇಂದ್ರಗಳಲ್ಲಿಯೂ ಯಾವುದೇ ರೀತಿಯ ಲೋಪದೋಷಗಳಿಲ್ಲದೆ ಈ ಪರೀಕ್ಷೆಗಳು ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.
ಆಗಸ್ಟ್ 02,2026 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಈ ಲಿಖಿತ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಗೆ ಒಟ್ಟು 24,434 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ವಿಜಯಪುರ ನಗರ ವ್ಯಾಪ್ತಿಯ 55 ಕೇಂದ್ರಗಳಲ್ಲಿ 21,993 ಅಭ್ಯರ್ಥಿಗಳು, ಕವಲಗಿಯ 02 ಕೇಂದ್ರಗಳಲ್ಲಿ 857 ಅಭ್ಯರ್ಥಿಗಳು, ತಿಕೋಟಾದ 03 ಕೇಂದ್ರಗಳಲ್ಲಿ 1,080 ಅಭ್ಯರ್ಥಿಗಳು ಹಾಗೂ ತಿಡಗುಂದಿ 01 ಕೇಂದ್ರದಲ್ಲಿ 504 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಪರೀಕ್ಷಾ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸಲು 20 ಮಾರ್ಗಾಧಿಕಾರಿ ತಂಡವನ್ನು ನೇಮಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಒಟ್ಟು 61 ವೀಕ್ಷಕರನ್ನು ಹಾಗೂ ಉಪ ಮುಖ್ಯ ಅಧೀಕ್ಷಕರು, ಪ್ರಶ್ನೆಪತ್ರಿಕೆ ಪಾಲಕರು ಮತ್ತು ವಿಶೇಷ ಸ್ಕ್ವಾಡ್ ಸದಸ್ಯರನ್ನು ನಿಯೋಜಿಸಲಾಗಿದೆ ಎಂದರು.
ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ಸಾಮಗ್ರಿಗಳ ಸುರಕ್ಷಿತ ಸಾಗಾಣಿಕೆಗಾಗಿ ಅಪರ ಜಿಲ್ಲಾಧಿಕಾರಿಗಳು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಬೆಳಕು, ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನಂತಹ ಸೌಕರ್ಯ ಹೊಂದಿರುವುದನ್ನು ಖಚಿತಪಡಿಸಿಕೊಳ್ಳಿ.. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದ್ದು, ಬಯೋಮೆಟ್ರಿಕ್, ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಹಾಗೂ ಮೆಟಲ್ ಡಿಟೆಕ್ಟರ್ ಮೂಲಕ ಪರೀಕ್ಷಾರ್ಥಿಗಳನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲು ಸೂಚಿಸಲಾಗಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 