ಜನ್ಮದಿನಾಚರಣೆ, ವಿವಾಹ ರ್ವಾಕೋತ್ಸವ: ಪೊಲೀಸರಿಗೆ ರಜೆ ಮಂಜೂರು
Police granted leave for birthday celebrations, wedding receptions
ಬೆಂಗಳೂರು: ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳ ಜನ್ಮದಿನಾಚರಣೆ ಹಾಗೂ "ವಾಹ ರ್ವಾಕೋತ್ಸವಕ್ಕೆ ಸಾಂದರ್ಭಿಕ ರಜೆ ಮಂಜೂರು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರು ಎಲ್ಲ ಘಟಕದ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ತಮ್ಮ ವೈಯಕ್ತಿಕ ಕಾರ್ಯಕ್ರಮಗಳನ್ನು ಬದಿಗೊತ್ತಿ ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಗೊಳಿಸುವ ಕೆಲಸದಲ್ಲಿ ಪೊಲೀಸರು ಮಗ್ನರಾಗಿರುತ್ತಾರೆ. ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು, ತಮ್ಮ ಜನ್ಮದಿನಾಚರಣೆ ಹಾಗೂ "ವಾಹ ರ್ವಾಕೋತ್ಸವದಂತಹ ಕಾರ್ಯಕ್ರಮ ಆಚರಿಸುವುದು ಬಹಳ ಮಹತ್ವದ್ದು. ಈ "ಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚೇತನಗೊಳ್ಳಲು, ಕುಟುಂಬದ ಜತೆಗೆ ಸಂಭ್ರಮದಿಂದ ಸಮಯ ಕಳೆಯುವುದಕ್ಕೆ ಸಾಧ್ಯವಾಗಲಿದೆ. ಕರ್ತವ್ಯ ಹಾಗೂ ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಲು ಸಹಾಯ ಆಗುತ್ತದೆ. ಮನೋಬಲವು ವೃದ್ಧಿ ಆಗುತ್ತದೆ. ಒತ್ತಡ ಕಡಿಮೆಯಾಗಿ ಒಟ್ಟಾರೆ ಕೆಲಸದ ತೃಪ್ತಿ ಉತ್ಪಾದಕತೆ ಹೆಚ್ಚಿಸುತ್ತದೆ ಎಂದು ಸಲೀಂ ಆದೇಶದಲ್ಲಿ ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಜನ್ಮದಿನಾಚರಣೆ ಹಾಗೂ "ವಾಹ ರ್ವಾಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ ತಪ್ಪದೇ ರಜೆ ಮಂಜೂರು ಮಾಡಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 