ಚಿತ್ತವಾಡ್ಗಿಯಲ್ಲಿ ಪೋಲೀಯೋ ಹನಿ ಹಾಕುವ ಮೂಲಕ ಚಾಲನೆ
Polio drops administered in Chittawadgi
ಹೊಸಪೇಟೆ 21 :- ಇಂದು ಹೊಸಪೇಟೆಯ ಚಿತ್ತವಾಡ್ಗಿಯ 1ನೇ ವಾರ್ಡನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಚಿತ್ತವಾಡ್ಗಿಯಲ್ಲಿ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಹೆಚ್. ಎನ್. ಮೊಹಮ್ಮದ್ ಇಮಾಮ್ ನಿಯಾಜಿರವರು ಭಾಗವ ಪೋಲೀಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಪೋಲಿಯೋ ಮಾರಕರೋಗವಾಗಿದ್ದು, ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯವನ್ನು ಉಂಟುಮಾಡಬಹುದು. ಈ ರೋಗಕ್ಕೆ ಯಾವುದೇ ಚಿಕಿತ್ಸೆ ಇಲ್ಲದಿದ್ದರು ಲಸಿಕೆ ಮೂಲಕ ಇದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿದೆ. ಎರಡು ಹನಿ ಲಸಿಕೆ ನಿಮ್ಮ ಮಗುವಿನ ಭವಿಷ್ಯವನ್ನು ನಿರ್ಧರಿಸಲಿದೆ ಎಂಬ ಘೋಷವಾಕ್ಯದಡಿ ಸರ್ಕಾರ ಅಭಿಯಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಹತ್ತಿರದ ಸರ್ಕಾರಿ ಆಸ್ಪತ್ರೆಗಳು, ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಬಸ್, ರೆಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಲಸಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೊದಲ ದಿನ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಬಳಿಕ ಎರಡು ದಿನ ಆರೋಗ್ಯ ಇಲಾಖೆ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಲಸಿಕೆ ಪಡೆಯದ ಮಕ್ಕಳಿಗೆ ಲಸಿಕೆ ನೀಡುತ್ತಾರೆ.
ದಿನಾಂಕ 21/12/25 ರಿಂದ 24/12/25 ರವರೆಗೆ ನಗರದ ಅಂಗನವಾಡಿ ಆರೋಗ್ಯ ಕೇಂದ್ರ ಸರ್ಕಾರಿ ಶಾಲೆಗಳಲ್ಲಿ ಅಭಿಯಾನ ನಡೆಯುತ್ತಿದು ಹೊಸಪೇಟೆಯ ಸಮಸ್ತ ಸಾರ್ವಜನಿಕರು ತಮ್ಮ ಮಕ್ಕಳಿಗೆ ಪೋಲೀಯೋ ಲಸಿಕೆಯನ್ನು ಹಾಕಿಸುವ ಮೂಲಕ ಪೋಲೀಯೋ ಮುಕ್ತ ಭಾರತವನ್ನನಾಗಿಸೋಣ ಎಂದು ಹೇಳಿದರು. ಇದೇ ಸಂಧರ್ಭದಲ್ಲಿ ವೈದ್ಯರಾದ ಡಾ.ಬಸವರಾಜು ಅವರು ಅಜಾಮ್ ಮಾಳಗಿ ಅವರು ಆಶಾ ಕಾರ್ಯಕರ್ತೆರು ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 