ಜಾಗತಿಕ ಹಬ್ಬವಾಗಿ ಪೊಂಗಲ್ ಆಚರಣೆ
Pongal celebration as a global festival
ನವದೆಹಲಿ: ಸಂಕ್ರಾಂತಿ (ಪೊಂಗಲ್) ಹಬ್ಬ ಇದೀಗ ಜಾಗತಿಕ ಹಬ್ಬವಾಗಿ ಹೊರಹೊಮ್ಮಿದೆ. ಪ್ರಕೃತಿಯೊಂದಿಗೆ ಸಮತೋಲನ ಕಾಪಾಡಿಕೊಳ್ಳುವ ಸಂದೇಶವನ್ನು ಈ ಹಬ್ಬ ಜಗತ್ತಿಗೆ ಸಾರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕೇಂದ್ರ ಸಚಿವ ಎಲ್. ಮುರಗನ್ ಮನೆಗೆ ಭೇಟಿ ನೀಡಿದ ಪ್ರಧಾನಿ ಮೋದಿ, ಪೊಂಗಲ್ ಆಚರಣೆಯಲ್ಲಿ ಭಾಗಿಯಾಗಿದರು. ಈ ಹಬ್ಬವು ರೈತರ ಕಠಿಣ ಪರಿಶ್ರಮಕ್ಕೆ ಪ್ರತಿಬಿಂಬ. ಸಂಕ್ರಾಂತಿ ಹಬ್ಬದ ಆಚರಣೆಯ ಮೂಲಕ ಭೂಮಿ ಮತ್ತು ಸೂರ್ಯನಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ ಎಂದು ಮೋದಿ ಹೇಳಿದ್ದಾರೆ.
ತಮಿಳು ಸಂಸ್ಕೃತಿಯು ವಿಶ್ವದ ಅತ್ಯಂತ ಹಳೆಯ ನಾಗರಿಕತೆಗಳಲ್ಲಿ ಒಂದಾಗಿದೆ. ಶತಮಾನಗಳ ಜ್ಞಾನ ಮತ್ತು ಸಂಪ್ರದಾಯ ಒಳಗೊಂಡಿದೆ. ಈ ಪರಂಪರೆಯಿಂದ ಪ್ರೇರಿತರಾಗಿ ಇಂದಿನ ಭಾರತವು ಮುಂದುವರಿಯುತ್ತಿದೆ. ಸಾಂಸ್ಕೃತಿಕ ಬೇರುಗಳಿಂದ ದೇಶವು ಮತ್ತಷ್ಟು ಬಲಪಡುತ್ತದೆ ಎಂದು ಮೋದಿ ತಿಳಿಸಿದ್ದಾರೆ.
ಈ ಹಬ್ಬವು ಕೃಷಿ, ರೈತರು, ಗ್ರಾಮೀಣ ಬದುಕಿನೊಂದಿಗೆ ಸಂಬಂಧ ಹೊಂದಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ಪೊಂಗಲ್ ಕೇವಲ ಹಬ್ಬವಲ್ಲ. ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಬೇಕು. ಭೂಮಿಯು ನಮಗೆ ಇಷ್ಟೊಂದು ನೀಡುತ್ತಿರುವಾಗ ಅದನ್ನು ಪಾಲಿಸುವುದು ಮತ್ತು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಮೋದಿ ಹೇಳಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 