ರಾಮದುರ್ಗ 18: ಪಾಲಕರ ಬಡತನದ ಕಾರಣದಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕೇಂದ್ರ ಸರಕಾರ 2012-13 ರಲ್ಲಿ ಮದ್ಯಾಹ್ನದ ಪ್ರಾರಂಭಿಸಿದ್ದು, ಅದರ ಯಶಸ್ವಿಗೆ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕೆಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ಪಟ್ಟಣದ ಪುರಸಭೆ ಸಾಂಸ್ಕೃತಿಕ ಭವನದಲ್ಲಿ ರವಿವಾರ ತಾಲೂಕಾ ಪಂಚಾಯತಿ ವತಿಯಿಂದ ಮದ್ಯಾಹ್ನದ ಬಿಸಿಊಟ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಏರ್ಪಡಿಸಿದ ಒಂದು ದಿನದ ತರಬೇತಿ ಕಾಯರ್ಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಡ ಮಕ್ಕಳು ಅಪೌಷ್ಠಿಕತೆಯಿಂದ ಬಳಲಬಾರದು, ಸರಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಅಧಿಕಗೊಳಿಸುವ ಸದುದ್ದೇಶದಿಂದ ಮದ್ಯಾಹ್ನ ಬಿಸಿಊಟಕ್ಕೆ ಮಹತ್ವ ದೊರೆತಿದೆ. ಶಾಲೆಯಲ್ಲಿ ಅಡುಗೆ ಸಿಬ್ಬಂದಿ ಗುಣಮಟ್ಟದ ಆಹಾರ ತಯಾರಿಸಿ ಮಕ್ಕಳಿಗೆ ಬಡಿಸಬೇಕೆಂದು ತಿಳಿಸಿದರು.
ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಸದಸ್ಯ ರೇಣಪ್ಪ ಸೋಮಗೊಂಡ ಮಾತನಾಡಿ, ಶಾಲೆಯಲ್ಲಿ ಅಡುಗೆ ತಯಾರಿಸುವ ತಾಯಂದಿರುವ ಸರಕಾರಿ ಶಾಲೆಯಲ್ಲಿ ಓದುತ್ತಿರುವ ಎಲ್ಲ ಮಕ್ಕಳು ತಮ್ಮ ಸ್ವಂತ ಮಕ್ಕಳೆಂದು ತಿಳಿದು ರುಚಿಕರವಾದ ಊಟ ತಯಾರಿಸಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಅಲಾಸೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಎನ್.ಎ. ಶೇಖ ಅಡುಗೆ ತಾಯಾರಿಸುವಾಗ ವಹಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಜಿ.ಪಂ ಸದಸ್ಯೆ ಶಿವಕ್ಕ ಬೆಳವಡಿ, ಎಪಿಎಂಸಿ ಸದಸ್ಯ ದ್ಯಾವಪ್ಪ ಬೆಳವಡಿ, ತಾ.ಪಂ ಕಾರ್ಯನಿವರ್ಾಹಕ ಅಧಿಕಾರಿ ಎ.ಎಸ್. ಹನಸೋಡೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ವಿ. ಪಾಟೀಲ, ಸುರೇಶ ಏಣಿ, ಶಿವಪ್ಪ ಲಮಾಣಿ, ಗೋವಿಂದಪ್ಪ ಹಕಾಟಿ, ಕಸಾಪ ತಾಲೂಕಾ ಅಧ್ಯಕ್ಷ ಪಾಂಡುರಂಗ ಜಟಗನ್ನವರ ಸೇರಿದಂತೆ ಇತರರಿದ್ದರು.
ಅಕ್ಷರ ದಾಸೋಹ ತಾಲೂಕಾ ನಿದರ್ೇಶಕ ಬಿ. ಎನ್. ಮುನವಳ್ಳಿ ಸ್ವಾಗತಿಸಿದರು. ಶಿಕ್ಷಕ ಎನ್.ಎನ್. ಮೂಗನೂರ ಕಾರ್ಯಕ್ರಮ ನಿರೂಪಿಸಿದರು. ಕೆ. ವೈ. ಪಾಟೀಲ ವಂದಿಸಿದರು.