ಗ್ಯಾರಂಟಿ ಯೋಜನೆಗಳಿಂದ ಬಡತನ ನಿರ್ಮೂಲನೆ: ರಾಜೇಂದ್ರ ರಾಣೆ
Poverty eradication through guarantee schemes: Rajendra Rane
ಲೋಕದರ್ಶನ ವರದಿ
ಕಾರವಾರ, ಮಾ.8 :- ಮಹಿಳೆಯರು ಉನ್ನತ ಸ್ಥಾನಕ್ಕೇರಲು ಮತ್ತು ಆರ್ಥಿಕ ಸಬಲೀಕರಣವಾಗಲು ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ಸಹಕರಿಯಾಗಿದ್ದು, ಈ ಯೋಜನೆಗಳು ಬಡತನ ನಿರ್ಮೂಲನೆಗೆ ಕಾರಣವಾಗಿದೆ ಎಂದು ತಾಲೂಕು ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಾಜೇಂದ್ರ ರಾಣೆ ಹೇಳಿದರು. ಅವರು ಭಾನುವಾರ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ, ಕಾರವಾರ ತಾಲೂಕು ಪಂಚಗ್ಯಾರಠ ಯೋಜನೆಗಳ ಅನುಷ್ಠಾನ ಸಮಿತಿಯು ಆಯೋಜಿಸಲಾದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಕ್ತಿ ಯೋಜನೆಯಿಂದ ಮಹಿಳೆಯರು ನಾಡಿನಾದ್ಯಂತ ಉಚಿತವಾಗಿ ಪ್ರಯಾಣಿಸಲು ಸಾಧ್ಯವಾಗಿದೆ. ಗೃಹ ಲಕ್ಷ್ಮೀ ಯೋಜನೆಯಿಂದ ಪ್ರತಿ ಕುಟುಂಬದ ಯಜಮಾನಿಗೆ ರೂ. 2,000 ನೀಡಲಾಗುತ್ತಿದೆ. ಗೃಹ ಜ್ಯೋತಿ ಮೂಲಕ ಪ್ರತಿ ಕುಟುಂಬಕ್ಕೆ 200 ಯೂನಿಟ್ ವರೆಗೂ ಉಚಿತವಾಗಿ ವಿದ್ಯುತ್ ನೀಡಲಾಗಿದ್ದು, ಇದರಿಂದ ಪಾವತಿಸಬೇಕಾದ ವಿದ್ಯುತ್ ಬಿಲ್ ಮೊತ್ತ ಉಳಿತಾಯವಾಗಲಿದೆ, ರಾಜ್ಯದಲ್ಲಿ ಯಾರು ಕೂಡ ಹಸಿವಿನಿಂದ ಬಳಲಬಾರದೆಂದು ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿದ್ದು, ನಿರೋದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುತ್ತಿದ್ದು ಒಟ್ಟಾರೆಯಾಗಿ ಪ್ರತಿ ಕುಟುಂಬಕ್ಕೆ ತಿಂಗಳಿನಲ್ಲಿ 5 ರಿಂದ 6 ಸಾವಿರ ರೂ ಲಭಿಸುತ್ತಿದ್ದು, ಮಹಿಳೆಯರು ಆರ್ಥಿಕವಾಗಿ ಸಬಲರಾಗುವ ಜೊತೆಗೆ ಬಡತನ ನಿರ್ಮೂಲನೆ ಮಾಡಲು ಮುಖ್ಯ ಮಂತ್ರಿಗಳು ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ ಎಂದರು.
ತಾಲೂಕ ಕುಟುಂಬ ಕಲ್ಯಾಣಾಧಿಕಾರಿ ಡಾ. ಆಶ್ವಿನಿ ಬೋರಕರ್ ಮಾತನಾಡಿ, ಮಹಹಿಳೆಯರ ದಿನಚಾರಣೆ ಉತಜ ಣಠ ಉಚಿಟಿ (ಕೋಟ್ಟು ಗಳಿಸು) ಎಂಬ ಘೋಷ ವಾಖ್ಯಾದೊಂದಿಗೆ ಈ ವರ್ಷ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ. ಮಹಿಳೆಯರಿಗೆ ಪ್ರೋತ್ಸಾಹ, ಅವಕಾಶ, ಸನ್ಮಾನ, ಸಮಾನತೆ ನೀಡಿ, ಸಬಲರಾನ್ನಾಗಿಸಿದ್ದಾಗ ಅವರೂ ದೇಶದ ಅಭಿವೃದ್ಧಿಗೆ ಸಹಕರಿಯಾಗಲಿದ್ದಾರೆ ಎಂದರು.
ಭ್ರೂಣಾವಸ್ಥೆಯಿಂದಲ್ಲೇ ಮಹಿಳೆಯರ ಸಂಘರ್ಷ ಆರಂಭವಾಗುತ್ತಿದ್ದು, ಗರ್ಭದಲ್ಲಿರುವ ಮಗು ಗಂಡು, ಹೆಣ್ಣು ಎಂದು ಲಿಂಗ ಪರೀಕ್ಷೆ ಮಾಡುವುದು ಮತ್ತು ಅದನ್ನು ಆಧರಿಸಿ ಗರ್ಭಪಾತ ಮಾಡುವುದು ಕಾನೂನುಬಾಹಿರ ಅಪರಾಧವಾಗಿದ್ದು, ಅಕ್ರಮವಾಗಿ ಭ್ರೂಣ ಲಿಂಗ ಪತ್ತೆ ಮಾಡಿಸುವವರು, ಮಾಡುವವರು ಕಂಡು ಬಂದಲ್ಲಿ ತಕ್ಷಣವೇ ಆರೋಗ್ಯ ಕೇಂದ್ರದ ವೈದ್ಯರಿಗೆ, ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ, ಜಾರಿ ಅಧಿಕಾರಿ ಕಾರ್ಯಾಲಯದಲ್ಲಿ ಮಾಹಿತಿ ನೀಡಿ, ಮಾಹಿತಿ ನೀಡಿದದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಮತ್ತು ಅವರಿಗೆ ಸರ್ಕಾರದಿಂದ ಒಂದು ಲಕ್ಷ ಬಹುಮಾನ ನೀಡಲಾಗುತ್ತದೆ ಎಂದರು.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರಿಗೆ ಅನುಕೂಲವಾಗಿದೆ. ನಾವು ಗ್ಯಾರಂಟಿ ಯೋಜನೆಯ ಹಣದಿಂದ ಸ್ವಂತ ವ್ಯಾಪಾರ ಆರಂಭಿಸಿ ಉತ್ತಮ ಲಾಭ ದೊರೆತಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ವ್ಯಾಪಾರ ಆರಂಭಿಸಿ ಕೆಲವರಿಗೆ ಉದ್ಯೋಗ ನೀಡುವ ಗುರಿ ಹೊಂದಿದ್ದೇವೆ. ಅಲ್ಲದೇ, ಸಂಸಾರ ನಡೆಸಲು, ಮಕ್ಕಳ ವಿದ್ಯಾಭ್ಯಾಸಕ್ಕೆ, ಮನೆ ಬಾಡಿಗೆ ಕಟ್ಟಲು, ಆರೋಗ್ಯಕರ ಜೀವನ ನಡೆಸಲು ಕೂಡಾ ಅನುಕೂಲವಾಗಿದೆ. ಹೊಟ್ಟೆ ತುಂಬಾ ಊಟ ಮಾಡಲು ಮಕ್ಕಳ ಉತ್ತಮ ಹುದ್ದೆ ಪಡೆಯಲು ಕೂಡಾ ಸಹಕರಿಯಾಗಿದ್ದು, ಬಸ್ ನಲ್ಲಿ ಉಚಿತವಾಗಿ ತವರು ಮನೆಗೆ ಹೋಗಿ ಬರಲು ಸಹಕರಿಯಾಗಿದೆ ಒಟ್ಟಾರೆ ಗ್ಯಾರಂಟಿ ಯೋಜನೆಯ ಮೂಲಕ ಸರ್ಕಾರವು ಮಹಿಳೆಯರ ಸಬಲೀಕರಣಕ್ಕೆ ಬೆನ್ನೆಲುಬಾಗಿ ನಿಂತಿದೆ ಎಂದು ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಯ ಸದುಪಯೋಗ ಪಡಿಸಿಕೊಂಡ ಮಹಿಳಾ ಫಲಾನುಭವಿಗಳಿಗೆ ಸನ್ಮಾನಿಸಲಾಯಿತು ಹಾಗೂ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಮ್ಯೂಸಿಕಲ್ ಚೇರ್, ಬಾಲ್ ಇನ್ ಬಟಲ್, ರಂಗೋಲಿ, ಕಣ್ಣು ಪಟ್ಟಿ ಆಟ, ಸಂಗೀತ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ವಿಜೇತರಿಗೆ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೆ. ಸೈಲ್ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ವಾ.ಕ.ರ.ಸಾ ಸಂಸ್ಥೆಯ ಕಾರವಾರ ಘಟಕದ ವ್ಯವಸ್ಥಾಪಕಿ ಸೌಮ್ಯ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಪಿ. ಏಣಗೌಡರ, ತಾಲೂಕು ಪಂಚ ಗ್ಯಾರಂಟಿ ಯೋಜನೆಯ ಸಮಿತಿಯ ಸದಸ್ಯರು, ಫಲಾನುಭವಿಗಳು ಮತ್ತಿತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 