ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಹಿಧನ್ (ಪಿ.ಎಂ.-ಎಸ್.ವೈ.ಎಂ) ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆ
Pradhan Mantri Shramyogi Manhidhan (PM-SYM) Pension Scheme for Unorganized Sector Workers
ಗದಗ 31: ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ಸಮಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್- ಧನ್ (ಪಿಎಂ ಹಿಎಸ್‌ವೈಎಂ) ಎಂಬ ಮಹಾತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆ ಜಾರಿಗೆ ತಂದಿದೆ. ಈ ಸೌಲಭ್ಯವನ್ನು ಅಸಂಘಟಿತ ವಲಯದ ಕಾರ್ಮಿಕರು ಪಡೆದುಕೊಳ್ಳುವಂತಾಗಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯಡಿ ವಿವಿಧ ಅಸಂಘಟಿತ ಕಾರ್ಮಿಕರನ್ನು ನೋಂದಣಿ ಮಾಡುವುದಕ್ಕಾಗಿ ಜಿಲ್ಲಾದ್ಯಂತ ವಿಶೇಷ ಅಬಿಯಾನವನ್ನು ನಡೆಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಸಂಘಟಿತ ಕಾರ್ಮಿಕರಿಗೆ ಅವರ ಜೀವನ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ. ಇಂತಹ ಅಸಂಘಟಿತ ಕಾರ್ಮಿಕರಿಗೆ ವಂತಿಗೆ ಆಧಾರಿತ ಈ ಪಿಂಚಣಿ ಯೋಜನೆ ಸಹಕಾರಿಯಾಗಲಿದೆ. ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ. ಫಲಾನುಭವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3,000 /-ಗಳ ಖಚಿತ ಕನಿಷ್ಟ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗುತ್ತಾರೆ ಎಂದರು.
ಫಲಾನುಭವಿಯು ನಿರಂತರವಾಗಿ ವಂತಿಕೆಯನ್ನು ಪಾವತಿಸಿದ್ದು ಅವರು 60 ವರ್ಷದ ಒಳಗಾಗಿ ಮೃತಪಟ್ಟಲ್ಲಿ ಅಥವಾ ಶಾಶ್ವತ ಅಂಗ ನ್ಯೂನತೆಯಿಂದ ವಂತಿಕೆಯನ್ನು ಪಾವತಿಸಲು ಸಾಧ್ಯವಾಗದಿದ್ದಲ್ಲಿ ಅವನ / ಅವಳ ಸಂಗಾತಿಯುತದ ನಂತರ ಈ ಯೋಜನೆಗೆ ಸೇರಬಹುದಾಗಿದ್ದು ವಂತಿಕೆಯನ್ನು ಪಾವತಿಸಿ ಮುಂದುವರಿಸಬಹುದಾಗಿರುತ್ತದೆ ಅಥವಾ ಅವರ ವಂತಿಕೆಯನ್ನು ಬಡ್ಡಿಯೊಂದಿಗೆ ಪಡೆಯಲು ಅರ್ಹರು. ಪಿಂಚಣಿ ಆರಂಭಗೊಂಡ ನಂತರ ಚಂದಾದಾರರು ಮೃತಪಟ್ಟಲ್ಲಿ ಅವರ ಪತ್ನಿ/ ಪತಿ ಮಾತ್ರ ಪಿಂಚಣಿಯ ಶೇ.50 ರಷ್ಟು ಪಿಂಚಣಿಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಈ ಯೋಜನೆಯ ಸೌಲಭ್ಯದ ಸದ್ಭಳಕೆಯಾಗಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಮಾತನಾಡಿ ಪಿ.ಎಂ.-ಎಸ್ .ವೈ.ಎಂ ಯೋಜನೆಗೆ ಒಳಪಡುವ ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, 18 ರಿಂದ 40 ವರ್ಷದೊಳಗಿರಬೇಕು. ಗದಗ ಜಿಲ್ಲೆಯಲ್ಲಿನ 7275 ಅಸಂಘಟಿತ ಕಾರ್ಮಿಕರಿಗೆ ಈ ಯೋಜನೆ ನೊಂದಣಿ ಮಾಡುವ ಗುರಿ ನಿಗದಿಪಡಿಸಲಾಗಿದೆ. ಅವರ ಮಾಸಿಕ ಆದಾಯ ರೂ.15,000 / ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಅವರ ಆದಾಯತೆರಿಗೆ /ಇ.ಎಸ್.ಐ/ ಪಿ.ಎಫ್./ ಎನ್.ಪಿ.ಎಸ್. ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು. ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಸಂಖ್ಯೆ ಹೊಂದಿರಬೇಕು ಎಂದರು.
ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ ಕಾಮನ್ ಸರ್ವಿಸ್ ಸೆಂಟರ್ (ಸಿಎಸ್‌ಸಿ)ಗಳಲ್ಲಿ ಯೋಜನೆಯಡಿ ಫಲಾನುಭವಿಗಳಾಗಿ ನೊಂದಾಯಿಸಬಹುದಾಗಿರುತ್ತದೆ. ಸಿ.ಎಸ್.ಸಿ.ಗಳ ವಿವರಗಳನ್ನು ಹತ್ತಿರದ ಎಲ್.ಐ.ಸಿ. ಶಾಖೆಗಳು , ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇ.ಎಸ್.ಐ., ಕಾರ್ೋರೇಷನ್ ಹಾಗೂ ಭವಿಷ್ಯ ನಿದಿ ಸಂಘಟನೆಯ ಕಚೇರಿಗಳು ಹಾಗೂ ಇಲಾಖೆಯ ವೆಬ್‌ವಿಳಾಸಗಳು ಹಾಗೂ ವೆಬ್ ವಿಳಾಸ ಣಣಠಿ://ಟಠಚಿಣಠ.ಛಿಛಿಟಠಜ.ಟಿ ಗಳಲ್ಲಿ ಪಡೆಯಬಹುದಾಗಿದೆ. ಈ ಯೋಜನೆಯು ವಿದ್ಯುನ್ಮಾನ ಆಧಾರಿತವಾಗಿದ್ದು ಎಸ್.ಎಂ.ಎಸ್. ಮೂಲಕ ಎಲ್ಲ ವ್ಯವಹಾಗಳ ಮಾಹಿತಿಯನ್ನು ಫಲಾನುಭವಿಗೆ ಕಾಲಕಾಲಕ್ಕೆ ತಿಳಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿಗಳು ಸಭೆಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಧಾ ಮಣ್ಣೂರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಮಲ್ಲೂರ, ಸಹಾಯಕ ಕೃಷಿ ನಿರ್ದೇಶಕ ರಮೇಶ ನಾಯ್ಕ, ಕಾರ್ಮಿಕ ಇಲಾಖೆಯ ಸಂದೇಶ ಪಾಟೀಲ ಸೇರಿದಂತೆ ಇತರರು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 