ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಸಾದ್ ಅಬ್ಬಯ್ಯ
Prasad Abbayya launches Pulse Polio program
ಹುಬ್ಬಳ್ಳಿ ಡಿ.21: ಇಂದು ಎಸ್.ಎಸ್.ಕೃಷ್ಣ ನಗರದಲ್ಲಿರುವ ನಮ್ಮ ಕ್ಲಿನಿಕ್ ನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಹಾಗೂ ಪಾಲಿಕೆ ಸದಸ್ಯೆ ಫಾಮೀದಾ ಕಾರಡಗಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಅವರು, 1995 ರಲ್ಲಿ ಪಲ್ಸ ಪೋಲಿಯೋ ಕಾರ್ಯಕ್ರಮವನ್ನು ಜಾರಿಗೆ ತರಲಾಯಿತು. 1972 ರಲ್ಲಿ ಪಿಪಿಐ ಚುಚ್ಚುಮದ್ದನ್ನು ಹಾಕಲಾಗುತ್ತಿತ್ತು. ಈಗ ಚುಚ್ಚುಮದ್ದು ಬದಲಾಗಿ ಪೋಲಿಯೋ ಹನಿಯನ್ನು ಮಕ್ಕಳಿಗೆ ಹಾಕಬಹುದಾಗಿದೆ. ಎರಡು ಪೋಲಿಯೋ ಹನಿ ಮಕ್ಕಳಿಗೆ ಜೀವಾಮೃತವಾಗಿದೆ.
ಪೋಲಿಯೋ ಹನಿಗೆ 2013 ರವರೆಗೆ ಹೆಚ್ಚಿನ ಒತ್ತು ನೀಡಿದ್ದರಿಂದ 2014 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರ ಎಂದು ಘೋಷಣೆ ಮಾಡಿತು. ಮಕ್ಕಳಿಗೆ ಪೋಲಿಯೋ ಹಾಕಿಸದಿದ್ದರೇ ಮಕ್ಕಳು ಅಂಗವಿಕಲತೆಗೆ ತುತ್ತಾಗಲಿದ್ದಾರೆ. ಪೋಲಿಯೋ ಹನಿ ಹಾಕಿಸುವುದರಿಂದ ಮಕ್ಕಳು ಅಂಗವಿಕಲತೆಗೆ ಒಳಗಾಗುವುದಿಲ್ಲ. ಹೀಗಾಗಿ ಕಡ್ಡಾಯವಾಗಿ ಮಕ್ಕಳಿಗೆ ಎರಡು ಹನಿ ಪೋಲಿಯೋ ಹಾಕಿಸಬೇಕು ಎಂದರು. ಮಕ್ಕಳಿಗೆ ನಾಯಿಗಳು ಕಡಿದು ಅಸುನೀಗುತ್ತಿದ್ದಾರೆ. ಬೀದಿ ನಾಯಿಗಳ ಹಾವಳಿಯನ್ನು ತಪ್ಪಿಸಬೇಕಿದೆ. ಇಲ್ಲಿನ ಆಸ್ಪತ್ರೆಯನ್ನು ಸಮರ್ಕವಾಗಿ ನಿರ್ವಹಿಸಬೇಕು. ವೈದ್ಯರು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ರೋಗಿಗಳು ಹಾಗೂ ಸಾರ್ವಜನಿಕರೊಂದಿಗೆ ಆಸ್ಪತ್ರೆ ಸಿಬ್ಬಂದಿ ಅನುಚಿತವಾಗಿ ವರ್ತಿಸಬಾರದು. ಆಸ್ಪತ್ರೆಯ ಉಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಈ ಮೊದಲು ಎಸ್.ಎಂ.ಕೃಷ್ಣ ನಗರ ಕೆಟ್ಟ ಪ್ರದೇಶವಾಗಿತ್ತು. ಇಲ್ಲಿನ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿತ್ತು. ಆದರೆ ಈಗ ಉತ್ತಮ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಅಲ್ಲದೇ ರಾಜ ಕಾಲುವೆಗೆ ತಡೆಗೋಡೆ ನಿರ್ಮಿಸಲಾಗಿದೆ. ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿರುತ್ತದೆ. ಆ ನಿಟ್ಟಿನಲ್ಲಿ ಶಾಲೆ, ಕಾಲೇಜು, ಅಂಗನವಾಡಿಗಳನ್ನು ನಿರ್ಮಿಸಲಾಗಿದೆ. ನನ್ನ ಕ್ಷೇತ್ರದ ಅಂಬುಲೆನ್ಸಗಳು ಆಯಾ ಪ್ರದೇಶದ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸಬೇಕು. ಅತ್ಯುತ್ತಮ ಮಾರುಕಟ್ಟೆಯನ್ನು ನಿರ್ಮಿಸಲಾಗುವುದು. ಹೈಟೆಕ್ ರಸ್ತೆಯನ್ನು ನಿರ್ಮಾಣಕ್ಕೆ ಒತ್ತು ನೀಡಲಾಗುತ್ತದೆ. ಪೊಲೀಸ್ ಠಾಣೆ ಕೂಡ ಸ್ಥಾಪಿಸಲಾಗುವುದು. ರಾಜ ಕಾಲುವೆ ನಾಲಾ ಅಭಿವೃದ್ಧಿ ಪಡಿಸಲಾಗುತ್ತದೆ. ಒಟ್ಟಿನಲ್ಲಿ ಕರ್ನಾಟಕದ ಜನರು ಚನ್ನಾಗಿ ಇರಬೇಕು ಎಂದು ಅವರು ಆಶಿಸಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ ಘಾಳಿ ಮಾತನಾಡಿ, ಜಿಲ್ಲೆಯ ಸುಮಾರು 1.23 ಲಕ್ಷ ಮಕ್ಕಳು ಪಾಲಿಕೆ ವ್ಯಾಪ್ತಿಯಲ್ಲಿ ಬರುತ್ತಾರೆ. ಜಿಲ್ಲೆಯ ಶೇ.60 ರಷ್ಟು ಮಕ್ಕಳು ಇಲ್ಲಿದ್ದಾರೆ. ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಬೇಕು. ಇಲ್ಲಿನ ಜನರಿಗೆ ಅನುಕೂಲವಾಗುವಂತೆ ಆಸ್ಪತ್ರೆ ನಿರ್ಮಿಸಲಾಗಿದೆ. ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ ಮಾತನಾಡಿ, ಪಲ್ಸ ಪೋಲಿಯೋ ಕಾರ್ಯಕ್ರಮವನ್ನು ರಾಷ್ಟ್ರದಾದ್ಯಂತ ಆಚರಿಸಲಾಗುತ್ತಿದೆ.
2011 ರಿಂದ 2013 ರವರೆಗೆ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ಕಂಡು ಬರಲಿಲ್ಲ. 2014 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಭಾರತ ದೇಶವನ್ನು ಪೋಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿತು. ನೆರೆ ರಾಷ್ಟ್ರಗಳಲ್ಲಿ ಪೋಲಿಯೋ ಪ್ರಕರಣಗಳು ಕಂಡು ಬರುತ್ತಿರುವುದರಿಂದ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುತ್ತದೆ. ಮುಂದಿನ ದಿನಗಳಲ್ಲಿ ಪೋಲಿಯೋ ಖಾಯಿಲೆ ಮಕ್ಕಳಿಗೆ ಬರಬಾರದು ಎಂಬ ದೂರದೃಷ್ಟಿಯಿಂದ ಪೋಲಿಯೋ ಹನಿ ಹಾಕಿಸಲಾಗುತ್ತಿದೆ. ಜಿಲ್ಲೆಯ 2 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುತ್ತದೆ. ಸುಮಾರು 891 ಬೂತ್‌ಗಳನ್ನು ತೆರೆಯಲಾಗಿದ್ದು, 3600 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೇ ಇಂದಿನಿಂದ ಮೂರು ದಿನಗಳವರೆಗೆ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವರು. ಪೋಲಿಯೋ ಅಪಪ್ರಚಾರದ ಬಗ್ಗೆ ಕಿವಿಗೊಡದೆ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವೈದ್ಯಾಧಿಕಾರಿ ಡಾ.ಶ್ರೀಧರ ದಂಡಪ್ಪನವರ, ತಾಲೂಕು ವೈದ್ಯಾಧಿಕಾರಿ ಡಾ.ಹುಲಗಣ್ಣ ಇಂಜಗನರಿ, ತಾಲೂಕು ಆರೋಗ್ಯ ನೀರೀಕ್ಷಣಾಧಿಕಾರಿ ಓಂಕಾರಗೌಡರ, ಡಾ.ಪ್ರವೀಣ ಗೌರಿ, ಮುಖಂಡರಾದ ಶಬ್ಬೀರ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಪಾಲಿಕೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು ಸಾರ್ವಜನಿಕರು ಇತರರು ಭಾಗವಹಿಸಿದ್ದರು. ಆರ್.ಬಿ.ಎಸ್.ಕೆ ವೈದ್ಯರಾದ ಡಾ.ಬಸವರಾಜ ಕಮಡೊಳ್ಳಿ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 