ಪ್ರಸನ್ನ ಜೋಶಿಗೆ ಮಂತ್ರಾಲಯದ ಶ್ರೀಗಳಿಂದ ಗೌರವ ಡಾಕ್ಟರೇಟ್ ಪ್ರದಾನ
Prasanna Joshi awarded honorary doctorate by the Ministry of Mantralaya
ಧಾರವಾಡ 07 : ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ನಗರದ ಪ್ರಸನ್ನಕುಮಾರ ಜೋಶಿ ಅವರಿಗೆ ಅಮೇರಿಕೆಯ ಫ್ಲೋರಿಡಾದ ಯೋಗ-ಸಂಸ್ಕೃತಮ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ. ಇತ್ತೀಚೆಗೆ ಮಂತ್ರಾಲಯದ ಶ್ರೀ ಗುರುಸಾರ್ವಭೌಮ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಜರುಗಿದ ವಿಶೇಷ ಘಟಿಕೋತ್ಸವದಲ್ಲಿ ಡಾ. ಸುಬುಧೇಂದ್ರ ತೀರ್ಥ ಸ್ವಾಮಿಜಿಯವರು ಈ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿದರು.
ಕಳೆದ ಸುಮಾರು 26 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಪ್ರಾಯೋಗಿಕ ವಿಜ್ಞಾನ ಮಾದರಿಯ ಕಲಿಕೆ, ವಿವಿಧ ಕಲಿಕಾ ಪುಸ್ತಕಗಳ ಪ್ರಕಟಣೆ, ಇ-ಆಡಳಿತ ಇಲಾಖೆಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಯುಷ್ಠಾನ ಭಾರತ್, ಆರೋಗ್ಯ ಕರ್ನಾಟಕ ಯೋಜನೆಗೆ ಸಾರ್ವಜನಿಕರ ನೋಂದಣಿ, ವಿದ್ಯುತ್ ಉನ್ನತಿ ಪ್ರೊಜೆಕ್ಟ, ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ಕಾರ್ಮಿಕ ಕಾರ್ಡ ನೋಂದಣಿ ಹಾಗೂ ವಿತರಣೆ ಸೇರಿದಂತೆ ಹಲವಾರು ಜನಪರ ಸೇವೆಗಳಲ್ಲಿ ತಮ್ಮನ್ನೇ ತಾವು ತೊಡಗಿಸಿಕೊಂಡು ಸೇವೆಸಲ್ಲಿಸಿರುವ ನಗರದ ಪ್ರಸನ್ನಕುಮಾರ ಜೋಶಿ ಅವರನ್ನು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 