ಇಂದು ಮಹರ್ಷಿ ವಾಲ್ಮೀಕಿ ಜಾತ್ರೆಯ ನಿಮಿತ್ಯ ಪ್ರಸನ್ನಾನಂದಪುರಿ ಮಹಾ ಸ್ವಾಮೀಜಿಗಳ ಆಗಮನ
Prasannanandpuri Maha Swamiji arrives today on the occasion of Maharishi Valmiki Jatra
ಗದಗ 08 : ಗದಗ ಜಿಲ್ಲಾ ವಾಲ್ಮೀಕಿ ನಾಯಕ ಸೇವಾ ಸಂಘದ ವತಿಯಿಂದ ಜಿಲ್ಲಾಮಟ್ಟದ ಸಭೆಯನ್ನು ಕರೆಯಲಾಗಿದೆ ಪ್ರತಿ ವರ್ಷದಂತೆ ಫೆಬ್ರವರಿ 08 ಮತ್ತು 09 ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ ಐತಿಹಾಸಿಕ 8 ನೇ ವರ್ಷದ ಜಾತ್ರಾ ಮಹೋತ್ಸವದ ಪ್ರಯುಕ್ತ ಡಿ.9 ಮಂಗಳವಾರ ಬೆಳಿಗ್ಗೆ 10ಘಂಟೆಗೆ ಗದಗ ನಗರದ ವಾಲ್ಮೀಕಿ ಭವನದಲ್ಲಿ ಜಗದ್ಗುರು ಶ್ರೀ ಶ್ರೀ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾ ಸ್ವಾಮೀಜಿಯವರ ದಿವ್ಯ ಸಾನಿದ್ಯದಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆ -2026 ರ ಪೂರ್ವಭಾವಿ ಸಭೆ ಜರುಗಲಿದೆ.
ಕಾರಣ ಗದಗ ತಾಲೂಕು ಸೇರಿದಂತೆ ಲಕ್ಷ್ಮೇಶ್ವರ. ಶಿರಹಟ್ಟಿ. ಮುಂಡರಗಿ. ರೋಣ. ನರಗುಂದ. ಗಜೇಂದ್ರಗಡ. ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಗುರು ಹಿರಿಯರು, ಸಮಾಜದ ಜನಪ್ರತಿನಿಧಿಗಳು, ನೌಕರ ಬಾಂಧವರು, ಯುವಕರು, ಮಹಿಳೆಯರು, ಗದಗ ಜಿಲ್ಲಾ ಸುತ್ತಮುತ್ತ ಎಲ್ಲ ಗ್ರಾಮದ ವಾಲ್ಮೀಕಿ ನಾಯಕ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕು ಹಾಗೂ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಗದಗ ಜಿಲ್ಲಾ ವಾಲ್ಮೀಕಿ ನಾಯಕ ಸೇವಾ ಸಂಘದ ಗದಗ ಜಿಲ್ಲಾಧ್ಯಕ್ಷರಾದ ಬಸವರಾಜ.ಎಮ್. ಬೆಳಧಡಿ ಅವರು ಮತ್ತು ಯುವ ಘಟಕದ ಜಿಲ್ಲಾಧ್ಯಕ್ಷರಾದ ಅನಿಲಕುಮಾರ ಸಿದ್ದಮ್ಮನಹಳ್ಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 