ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿಯಾಗಿವೆ-ಪಟೇಲ್
ಕೊಪ್ಪಳ 24 ; ಇಂದಿನ ಮಕ್ಕಳೇ ಈ ನಾಡಿನ ಭಾವಿ ಪ್ರಜೆಗಳಾಗಿದ್ದು ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಅವರಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಹೊರಗಡೆ ತಂದು ಸಮಾಜದ ಮುಂದೆ ಪರಿಚಯಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಅತ್ಯಂತ ಸಹಕಾರಿ ಯಾಗಿದೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಅಭಿಪ್ರಾಯಪಟ್ಟರು, ಅವರು ಶುಕ್ರವಾರ ಬೆಳಗ್ಗೆ ಇಲ್ಲಿನ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಏರಿ್ಡಸಿದ ಕೊಪ್ಪಳ ಜಿಲ್ಲಾ ಮಟ್ಟದ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು, ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಕೂಡ ಯಾವುದೇ ಕ್ಷೇತ್ರದಲ್ಲಿ ಹಿಂದೆ ಇಲ್ಲ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ತಮ್ಮ ಪ್ರತಿಭೆಗಳನ್ನು ಗುರುತಿಸುವಂತಹ ಕೆಲಸಕ್ಕೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರುಮುಂದುವರೆದು ಮಾತನಾಡಿ ನಮ್ಮ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ ಎಂದು ತೋರಿಸಿ ಕೊಟ್ಟಿದ್ದಾರೆ ಇದು ಒಳ್ಳೆಯ ಬೆಳವಣಿಗೆ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಲು ಶಿಕ್ಷಕರು ಪ್ರಮಾಣಿಕ ಪ್ರಯತ್ನ ಮಾಡಬೇಕು, ಸರ್ಕಾರ ಜಾರಿಗೊಳಿಸಿರುವ ಹಲವಾರು ಯೋಜನೆಗಳ ಸದುಪಯೋಗ ವಿದ್ಯಾರ್ಥಿಗಳಿಗೆ ಸಿಗುವಂತಾಗಬೇಕು ಎಂದ ಅವರು ನಮ್ಮ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದೆ, ಏಕೆಂದರೆ ಎಲ್ಲಾ ರಂಗದ ಅಭಿವೃದ್ಧಿ ಶಿಕ್ಷಣ ರಂಗದಲ್ಲಿ ಅಡಗಿದೆ ಹೀಗಾಗಿ ಮೊದಲು ನಾವು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದ ಬೇಕಾಗಿದೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.ಸಮಾರಂಭದ ಅಧ್ಯಕ್ಷತೆಯನ್ನು ಇಲಾಖೆಯ ಉಪನಿರ್ದೇಶಕ ಶ್ರೀಶೈಲಪ್ಪ ಬಿರಾದರ್ ವಹಿಸಿದ್ದರು ವೇದಿಕೆ ಮೇಲೆ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಎ ಬಸವರಾಜ್ ಸೈಯದ್ ಮಹೆಬೂಬ್ ಹುಸೇನ್ ಶರಣಬಸನಗೌಡ ಪಾಟೀಲ್ ಬಸಯ್ಯ ಹೋಳಿ ಬಾಳಪ್ಪ ಕಾಳೆ ಮಹದೇವಪ್ಪ ವಿಜಯ್ ಕುಮಾರ್ ಮೈನುದ್ದೀನ್ ಅತ್ತಾರ್, ಶಾಲೆಯ ಮುಖ್ಯ ಶಿಕ್ಷಕ ಅಶೋಕ್ ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಶಿಕ್ಷಕರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು