ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಫ್ರಾನ್ಸಿಸ್‌.ಬಿ ಮಕ್ಕಳಲ್ಲಿನ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

Pratibha Karanji is a good platform to bring out the talents of Francis.B children in district leve


ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಫ್ರಾನ್ಸಿಸ್‌.ಬಿ  ಮಕ್ಕಳಲ್ಲಿನ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ 

ಬಳ್ಳಾರಿ 20:ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಅವರ ಪ್ರತಿಭೆಯನ್ನು ಹೊರಹಾಕುವಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಂತಹ ಕಾರ್ಯಕ್ರಮಗಳು ಸಹಕಾರಿಯಾಗಿದ್ದು, ಮಕ್ಕಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಂತ ಜಾನರ ವಿದ್ಯಾಸಂಸ್ಥೆಯ ವ್ಯವಸ್ಥಾಪಕರು ಹಾಗೂ ಪತ್ರ ವ್ಯವಹಾರಾಧಿಕಾರಿಗಳಾದ ಫಾದರ್ ಫ್ರಾನ್ಸಿಸ್‌.ಬಿ ಅವರು ಹೇಳಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕೋಟೆ ಪ್ರದೇಶದಲ್ಲಿರುವ ಸಂತಜಾನ್ ಪ್ರೌಢಶಾಲೆ ಆವರಣದಲ್ಲಿ ಶುಕ್ರವಾರ ಏರಿ​‍್ಡಸಿದ್ದ 2024-25ನೇ ಸಾಲಿನ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಎಲ್ಲಾ ಮಕ್ಕಳು ಸಮರ್ಥರು, ಎಲ್ಲರಲ್ಲೂ ಒಂದೊಂದು ವಿಧದ ಪ್ರತಿಭೆ ಅಡಗಿದ್ದು, ಅವುಗಳನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ನಮ್ಮ ಶಿಕ್ಷಕರು ಹಾಗೂ ಪೋಷಕರು ಮಾಡಬೇಕು. ಸೋಲು-ಗೆಲುವು ಮುಖ್ಯವಲ್ಲ, ಬದಲಾಗಿ ಮಕ್ಕಳು ಭಾಗವಹಿಸುವುದು ಮುಖ್ಯ ಎಂದರು. 

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲಾ ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡುವ ಕೆಲಸ ಶಿಕ್ಷಕರು ಮಾಡಬೇಕು. ಪಾಠದ ಜತೆಗೆ ಕಲೆ ಮತ್ತು ಸಂಸ್ಕೃತಿಯನ್ನು ಅತ್ಯಂತ ಪರಿಣಾಮಕಾರಿಯಾಗಿ ತಿಳಿಸುವ ಕೆಲಸ ಮಾಡಬೇಕು ಎಂದರು. 

ನಮ್ಮ ಜಿಲ್ಲೆಯ ಹೆಚ್ಚಿನ ಮಕ್ಕಳು ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಿಂಚಿ, ಹೆಚ್ಚಿನ ಪ್ರಶಸ್ತಿಗಳನ್ನು ತರುವುದರ ಮೂಲಕ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು. 

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಗೆ ನಿಯೋಜಿತರಾದ ತೀರ​‍್ುಗಾರರರು ಅತ್ಯಂತ ನಿಷ್ಪಕ್ಷಪಾತವಾಗಿ ಪ್ರತಿಭಾವಂತರನ್ನು ಆಯ್ಕೆ ಮಾಡಬೇಕು. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಆಯ್ಕೆಯಾದ ಪ್ರತಿಭೆಗಳು ರಾಜ್ಯಮಟ್ಟದಲ್ಲಿ ನಡೆಯುವ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. 

ಡಯಟ್‌ನ ಉಪನಿರ್ದೇಶಕ ಓ.ಆರ್‌.ಪ್ರಕಾಶ್ ಅವರು ಮಾತನಾಡಿ, ಒಬ್ಬ ವ್ಯಕ್ತಿಯ ತನ್ನಲ್ಲಿನ ಕಲೆ ಹಾಗೂ ಪತ್ರಿಭೇ ಬಾಲ್ಯದಲ್ಲಿಯೇ ಬಿಂಬಿತಗೊಳ್ಳುತ್ತವೆ. ಅವುಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಮತ್ತು ಗುರುತಿಸುವ ಪೋಷಕರು, ಶಿಕ್ಷಕರು ಮುಖ್ಯವಾಗುತ್ತಾರೆ ಎಂದು ಹೇಳಿದರು. 

ಕಲೆ ಎಲ್ಲರನ್ನು ಕೈ ಬೀಸಿ ಕರೆಯುತ್ತದೆ, ಆದರೆ ಕೆಲವರನ್ನು ಮಾತ್ರ ಅಪ್ಪಿಕೊಳ್ಳುತ್ತದೆ. ಗೆದ್ದವರು ಸಂತಸಪಟ್ಟರೆ, ಸೋತವರಿಗೆ ಮತ್ತೊಮ್ಮೆ ಗೆಲ್ಲುವ ಅವಕಾಶ ಇರುತ್ತದೆ. ಬೇರೆ-ಬೇರೆ ಅವಕಾಶಗಳು ತೆರೆದುಕೊಳ್ಳುತ್ತವೆ. ಹಾಗಾಗಿ ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದರು. 

ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ನೋಡೆಲ್ ಅಧಿಕಾರಿ ವಿರೇಶಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಭಾ ಕಾರಂಜಿಯ ಧ್ಯೇಯೊದ್ದೇಶಗಳನ್ನು ವಿವರಿಸಿದರು. 

ಕಾರ್ಯಕ್ರಮದಲ್ಲಿ ಶಾಲಾ ಮತ್ತು ಪ್ರೌಢ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗಗಳಲ್ಲಿ ಅವಕಾಶ ಕಲ್ಪಿಸಲಾಗಿತ್ತು. 

ಈ ಸಂದರ್ಭದಲ್ಲಿ ಸಂತಜಾನರ ಪ್ರೌಢಶಾಲೆಯ ಮುಖ್ಯಗುರುಗಳಾದ ಶಾಂತುಶೀಲನ್ ಸೇರಿದಂತೆ ಜಿಲ್ಲಾ ಶಿಕ್ಷಣಾಧಿಕಾರಿಗಳು, ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿಗಳು, ಡಯಟ್ ಉಪನ್ಯಾಸಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ದೈಹಿಕ ಶಿಕ್ಷಣ ಪರೀವೀಕ್ಷಕರು, ವಿಷಯ ಪರೀವೀಕ್ಷಕರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸರ್ಕಾರಿ, ಅನುದಾನ ರಹಿತ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು, ಇತರರು ಉಪಸ್ಥಿತರಿದ್ದರು.