ಭಗವಾನ ಮಹಾವೀರ ಜಯಂತಿಯ ಪೂರ್ವಭಾವಿ ಸಭೆ
Pre-meeting for Lord Mahavir Jayanti
ಲೋಕದರ್ಶನ ವರದಿ
ಗದಗ 13 : ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ಭಗವಾನ್ ಮಹಾವೀರ ಜಯಂತಿ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆಯು ಜರುಗಿತು.
ಭಗವಾನ ಮಹಾವೀರ ಜಯಂತಿಯನ್ನು ಮಾರ್ಚ್ 30 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಆಚರಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಸಮಾಜದ ಹಿರಿಯರು, ಗಣ್ಯರು, ಮುಖಂಡರು, ತಹಶೀಲ್ದಾರರಾದ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅಮಿತ್ ಬಿದರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ವ್ಹಿ. ಬಳ್ಳಾರಿ ಸರ್ವರನ್ನು ಸ್ವಾಗತಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 