ಭಗವಾನ ಮಹಾವೀರ ಜಯಂತಿಯ ಪೂರ್ವಭಾವಿ ಸಭೆ

ಭಗವಾನ ಮಹಾವೀರ ಜಯಂತಿಯ ಪೂರ್ವಭಾವಿ ಸಭೆ Pre-meeting for Lord Mahavir Jayanti

ಲೋಕದರ್ಶನ ವರದಿ 

ಗದಗ  13 : ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ಭಗವಾನ್  ಮಹಾವೀರ  ಜಯಂತಿ ಆಚರಣೆ  ಕುರಿತು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ಅವರ ಅಧ್ಯಕ್ಷತೆಯಲ್ಲಿ  ಪೂರ್ವಸಿದ್ಧತಾ ಸಭೆಯು ಜರುಗಿತು.    

ಭಗವಾನ ಮಹಾವೀರ ಜಯಂತಿಯನ್ನು ಮಾರ್ಚ್‌ 30 ರಂದು ಬೆಳಿಗ್ಗೆ 11 ಗಂಟೆಗೆ  ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಆಚರಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.    

ಸಭೆಯಲ್ಲಿ ಸಮಾಜದ ಹಿರಿಯರು, ಗಣ್ಯರು, ಮುಖಂಡರು, ತಹಶೀಲ್ದಾರರಾದ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ.ತುಂಬರಮಟ್ಟಿ,  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅಮಿತ್ ಬಿದರಿ ಸೇರಿದಂತೆ  ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ವ್ಹಿ. ಬಳ್ಳಾರಿ ಸರ್ವರನ್ನು ಸ್ವಾಗತಿಸಿದರು.