ಗಣರಾಜ್ಯೋತ್ಸವದ ಆಚರಣೆಗೆ ಪೂರ್ವಭಾವಿ ಸಭೆ
ಬ್ಯಾಡಗಿ 16: ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ತಾಲೂಕು ಕಚೇರಿ ಆವರಣದಲ್ಲಿ ವಿವಿಧ ಇಲಾಖೆಯ ಅಧಿಕಾರಿ, ಸಂಘ ಸಂಸ್ಥೆಯ ಪದಾಧಿಕಾರಿಗಳ ಸಮ್ಮುಖದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಪೂರ್ವಭಾವಿಸಭೆ ಆಯೋಜಿ ಸಲಾಗಿತ್ತು.ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರೇಟ್ 2 ತಹಶೀಲ್ದಾರ ಅಕ್ಷತಾ, ಜ.26 ರಂದು ನಡೆಯುವ ಗಣರಾಜ್ಯೋತ್ಸವ ಆಚರಣೆಯ ಸಲಹೆ ಸೂಚನೆಗಳನ್ನು ಮತ್ತು ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು ಎಲ್ಲ ಇಲಾಖೆ ಅಧಿಕಾರಿಗಳು ಕಾರ್ಯಕ್ರಮಕ್ಕೆ ಅಗತ್ಯವಿರುವ ಸಿದ್ಧತೆ ಮಾಡಿಕೊಂಡು ಗಣರಾಜ್ಯೋತ್ಸವವನ್ನು ಅರ್ಥ ಪೂರ್ಣವಾಗಿ ಆಚರಿಸಲು ಸಹಕರಿಸಬೇಕು ಎಂದು ಸೂಚನೆ ನೀಡಿದರು.
ಪ್ರತಿ ಸರಕಾರಿ ಮತ್ತು ಅಂತರಾಷ್ಟ್ರಿಯ ಬ್ಯಾಂಕುಗಳು ಹಾಗೂ ಸಹಕಾರಿ ಸಂಘ ಸಂಸ್ಥೆಗಳ ಕಟ್ಟಡದಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ಹಾರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಶೋಭೆ ತರಬೇಕು ಮತ್ತು ಧ್ವಜಾರೋಹಣ ಮಾಡದೇ ಇರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಆಗಿ ಸೊಚನೆ ನೀಡಿದರು. ಮತ್ತು ತಾಲೂಕಿನ ನಿವೃತ್ತ ನೌಕರರಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಸನ್ಮಾನಿಸಲು ನಿರ್ಧಾರಿಸಲಾಯಿತು.ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಜಿ ಕೋಟಿ ಮಾತನಾಡಿ, ಜನವರಿ 26ರಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕರು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಬಸವರಾಜ ಶಿವಣ್ಣನವರ ಅವರು ಧ್ವಜಾರೋಹಣ ನೆರ ವೇರಿಸಲಿದ್ದು, ತಾಲೂಕು ಕ್ರೀಡಾಂಗಣದಲ್ಲಿ ಆಚರಿಸುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯಾವುದೇ ಲೋಪ ದೋಷ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಅಲ್ಲದೆ ಗಣರಾಜ್ಯೂತ್ಸವದ ಕಾರ್ಯ ಕ್ರಮದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಪ್ರತಿ ಇಲಾಖೆಗೂ ಒಂದೊಂದು ಜವಾಬ್ದಾರಿ ವಹಿಸಿದರು.ಈ ಸಂಧರ್ಭದಲ್ಲಿ ಪಶು ವೈದ್ಯಾಧಿಕಾರಿಗಳು ಚೌಡಾಳ.ಸಮಾಜ ಕಲ್ಯಾಣ ಅಧಿಕಾರಿ ಎಸ್ ಸಿ ಪ್ರಸಾದಿಮಠ.ಜೆ ಜೆ ಎಂ ಅಧಿಕಾರಿ ಸುರೇಶ ಬೇಡರ.ಮುಖಂಡ ಮುರಗೆಪ್ಪ ಶೆಟ್ಟರ.ಮಾಜಿ ಸೈನಿಕ ಮಲ್ಲೇಶಪ್ಪ ಚಿಕ್ಕಣ್ಣನವರ.ಅಗ್ನಿ ಶಾಮಕ ದಳದ ಅಧಿಕಾರಿ ಕುಮಾರ ಸ್ವಾಮಿ.ದೂಡ್ಡಬಸಣ್ಣನವರ.ಅಜಿಜ ಬಿಜಾಪುರ.ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.