ಬ್ರಹ್ಮಶ್ರೀ ನಾರಾಯಣ, ವಿಶ್ವಕರ್ಮ ಜಯಂತಿ ಆಚರಣೆಯ ಪೂರ್ವ ಸಿದ್ಧತಾ ಸಭೆ

ಬ್ರಹ್ಮಶ್ರೀ ನಾರಾಯಣ, ವಿಶ್ವಕರ್ಮ ಜಯಂತಿ ಆಚರಣೆಯ ಪೂರ್ವ ಸಿದ್ಧತಾ ಸಭೆ  Pre-preparatory meeting for Brahmashri Narayana, Vishwakarma Jayanti celebrations

ಬ್ರಹ್ಮಶ್ರೀ ನಾರಾಯಣ, ವಿಶ್ವಕರ್ಮ ಜಯಂತಿ ಆಚರಣೆಯ ಪೂರ್ವ ಸಿದ್ಧತಾ ಸಭೆ  

ಬೆಳಗಾವಿ, ಸೆ.10 : ಬ್ರಹ್ಮಶ್ರೀ ನಾರಾಯಣ ಹಾಗೂ ವಿಶ್ವಕರ್ಮ ಜಯಂತಿಗಳನ್ನು ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.  ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಸೆ.10) ನಡೆದ ಬ್ರಹ್ಮಶ್ರೀ ನಾರಾಯಣ ಹಾಗೂ ವಿಶ್ವಕರ್ಮ ಜಯಂತಿಗಳ ಆಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ವಿಶ್ವಕರ್ಮ ಸೆ.17 ರಂದು ಹಾಗೂ ಬ್ರಹ್ಮಶ್ರೀ ನಾರಾಯಣ ಜಯಂತಿಯನ್ನು ಸೆ.21 ರಂದು ಬೆಳಿಗ್ಗೆ 11 ಗಂಟೆಗೆ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಆಯೋಜಿಸಲು ತಿಳಿಸಿದರು. ಕಾರ್ಯಕ್ರಮದ ಕುರಿತು ಮುದ್ರಿಸಲಾಗುವ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದನ್ವಯ ಮುದ್ರಿಸಿ ಗಣ್ಯ ಮಾನ್ಯರನ್ನು ಸಮಾರಂಭಕ್ಕೆ ಸಾಕಷ್ಟು ಮುಂಚಿತವಾಗಿ ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಹಾಗೂ ವಿಶ್ವಕರ್ಮ ಅವರ ಜೀವನ ಸಾಧನೆಗಳ ಬಗ್ಗೆ ತಿಳಿಸುವಂತಹ ನುರಿತ ಸಂಪನ್ಮೂಲ ವ್ಯಕ್ತಿಯನ್ನು  ಆಹ್ವಾನಿಸುವಂತೆ ತಿಳಿಸಿದರು. ವಿಶ್ವಕರ್ಮ ಜಯಂತಿಯ ಮೆರವಣಿಗೆ ಕುರಿತು ಸದರಿ ಸಭೆಯಲ್ಲಿ ಚರ್ಚಿಸಲಾಯಿತು. ಮೆರವಣಿಗೆಯನ್ನು ಅದ್ಧೂರಿಯಾಗಿ ನಡೆಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಸಮಾಜದ ಗಣ್ಯರು, ಮುಖಂಡರುಗಳು ಉಪಸ್ಥಿತರಿದ್ದರು.