ಸೇವಾ ಪೂರ್ವ ತರಬೇತಿ ಮುಕ್ತಾಯ ಸಮಾರಂಭ
Pre-service training graduation ceremony
ತಾಳಿಕೋಟಿ 28: ಪಟ್ಟಣದ ಲಕ್ಷ್ಮಣಸಿಂಗ್ ಅ.ಹಜೇರಿ ವಿದ್ಯಾಭಾರತಿ ಪ್ರೌಢಶಾಲೆಯಲ್ಲಿ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯ ಬಿ.ಎಡ್. ಪ್ರಶಿಕ್ಷಣಾರ್ಥಿಗಳ 25 ದಿನಗಳ ನಿಕಟ ಸೇವಾ ಪೂರ್ವ ತರಬೇತಿ ಮುಕ್ತಾಯ ಸಮಾರಂಭವನ್ನು ಬುಧವಾರ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಪ್ರದೀಪಜಿ ಆರ್.ಅವರು ಮಾತನಾಡಿ ಬಿ. ಈಡಿ. ಪ್ರಶಿಕ್ಷಣಾರ್ಥಿಗಳಿಗೆ ಶಾಲೆಯ ಸಹಶಿಕ್ಷಕರು ಉತ್ತಮವಾದ ಸಲಹೆ ಸೂಚನೆ ನೀಡಿದ್ದಾರೆ. ಇಲ್ಲಿಯ ಮಕ್ಕಳು ಕೂಡ ಅಭ್ಯಾಸದ ಜೊತೆ ಸಹಕಾರ ನೀಡಿದ್ದಾರೆ, ಪ್ರಶಿಕ್ಷಣಾರ್ಥಿಗಳಿಂದ 25 ದಿನಗಳ ಕಾಲ ನಮ್ಮ ಮಕ್ಕಳಿಗೆ ಉತ್ತಮ ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ಕೈಗೊಂಡು ಕಲಿಕಾ ಬಲವರ್ಧನೆಗೆ ಶಕ್ತಿ ತುಂಬಿದ್ದಾರೆ.
ಹೀಗಾಗಿ ಪ್ರಶಿಕ್ಷಣಾರ್ಥಿಗಳಿಗೆ ಉತ್ತಮವಾದ ತರಬೇತಿಯಾಗಿದೆ ಎಂದು ಹೇಳಿದರು.ಬಾಲ ಭಾರತಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಮಹೇಶಜಿ ಅವರು ಪ್ರಶಿಕ್ಷಣಾರ್ಥಿಗಳು ತಮ್ಮ ಬಿ. ಎಡ್ ಅಭ್ಯಾಸದ ಜೊತೆ ಖಿಇಖಿ ಮತ್ತು ಅಇಖಿ ಕುರಿತು ಅಭ್ಯಾಸವನ್ನು ಕೂಡ ಕೈಗೊಂಡು ತಮ್ಮ ಮುಂದಿನ ಉತ್ತಮ ಬದುಕನ್ನು ಕಟ್ಟಿಕೊಳ್ಳುವ ಪ್ರಯತ್ನ ಮಾಡಬೇಕೆಂದು ತಿಳಿಸಿದರು. ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕರಾದ ಉಮೇಶ ಮಂಗೊಂಡ ಮಾತನಾಡಿ ನಮ್ಮ ಪ್ರಶಿಕ್ಷಣಾರ್ಥಿಗಳಿಗೆ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಹಶಿಕ್ಷಕರು ಉತ್ತಮವಾದ ಮಾರ್ಗದರ್ಶನ ಹಾಗೂ ಸಲಹೆ ಸೂಚನೆ ನೀಡಿದ್ದಾರೆ.
ಪ್ರಶಿಕ್ಷಣಾರ್ಥಿಗಳು ಘಟಕ ಪರೀಕ್ಷೆಗಳನ್ನ ಉತ್ತಮವಾಗಿ ತೆಗೆದುಕೊಂಡಿದ್ದಾರೆ ಪ್ರಥಮ ದ್ವಿತೀಯ ತೃತೀಯ ಬಂದ ವಿದ್ಯಾರ್ಥಿಗಳಿಗೆ ಬಹುಮಾನವನ್ನ ನೀಡಿದ್ದು ವಿದ್ಯಾರ್ಥಿಗಳು ಉತ್ತಮ ರೀತಿ ಪಾಠವನ್ನು ಆಲಿಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ತೆಗೆದುಕೊಂಡಿದ್ದು ನೋಡಿದರೆ ಇಲ್ಲಿ ವಿದ್ಯಾರ್ಥಿಗಳು ಅಭ್ಯಾಸದ ಜೊತೆ ಸಹಕಾರ ನೀಡಿದ್ದಾರೆ, ಹೀಗಾಗಿ ನಮ್ಮ ಪ್ರಶಿಕ್ಷಣಾರ್ಥಿಗಳಿಗೆ ಉತ್ತಮವಾದ ತರಬೇತಿಯಾಗಿದೆ ಎಂದು ಹೇಳಿದರು.
ಪ್ರೌಢಶಾಲಾ ಸಹ ಶಿಕ್ಷಕ ಈರಣ್ಣ ಶರಣರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು ಹಾಗೂ ಶಾಲೆಯ ವಿದ್ಯಾರ್ಥಿಗಳು ಪ್ರಶಿಕ್ಷಣಾರ್ಥಿಗಳ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. 9ನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥನೆ ಗೀತೆ ಹಾಡಿದರು. ಮಯೂರ ಕೊಡಭಾಗಿ ಸ್ವಾಗತಿಸಿದರು. ಸಿದ್ದಪ್ಪ ವಂದಿಸಿದರು. ಸಂತೋಷ ಬಿರಾದಾರ ನಿರೂಪಿಸಿದರು. ಈ ಸಂದರ್ಭದಲ್ಲಿ ಸಮಸ್ತ ಶಿಕ್ಷಕ-ಶಿಕ್ಷಕಿಯರು, ಸಿಬ್ಬಂದಿ ವರ್ಗದವರು, ಪ್ರಶಿಕ್ಷಣಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 