ಬರ ಪೀಡಿತ ತಾಲೂಕುಗಳ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು

ಬೆಳಗಾವಿ, 15: ಬರ ಪೀಡಿತ ತಾಲೂಕುಗಳೆಂದು ಘೋಷಣೆಯಾಗಿರುವ ಅಥಣಿ, ರಾಮದುರ್ಗ ಮತ್ತು ಸವದತ್ತಿ ತಾಲೂಕುಗಳಲ್ಲಿ ಬರಗಾಲ ಸಂದರ್ಭದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಕೈಗೋಳ್ಳಬಹುದಾದ ಮುಂಜಾಗ್ರತ ಕ್ರಮಗಳ ಕುರಿತು ನವೆಂಬರ್ 15 ರಂದು ವಿಡಿಯೋ ಸಂವಾದದಲ್ಲಿ ಮಾನ್ಯ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳು ಚಚರ್ಿಸಿದರು.

  ಬರಪರಿಸ್ಥಿತಿಯನ್ನು ನೀಗಿಸುವ ಸಲುವಾಗಿ, ಜನರ ಸಂಕಷ್ಟಗಳನ್ನು ದೂರ ಮಾಡಲು ಹಾಗೂ ಉದ್ಯೋಗಕ್ಕಾಗಿ ಅರಸಿಕೊಂಡು ನಗರ/ಪಟ್ಟಣ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟಲು ಹೆಚ್ಚಿನ ಸಂಖ್ಯೆಯಲ್ಲಿ ಅಕುಶಲ ಕುಲಿಕಾರರಿಗೆ ಉದ್ಯೋಗ ಒದಗಿಸುವ ಸಮುದಾಯ ಕಾಮಗಾರಿಗಳನ್ನು ಗುರುತಿಸಿ, ಕ್ರಿಯಾಯೋಜನೆ ತಯಾರಿಸಿ ಯಾವುದೇ ಸಂದರ್ಭದಲ್ಲಿ ಕೆಲಸ ಕೇಳಿ ಬಂದವರಿಗೆ ಉದ್ಯೋಗ ನೀಡಲು ಪೂರ್ವಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು. ಅಲ್ಲದೆ ಬರಪೀಡಿತ ಪ್ರದೇಶಗಳಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿರುವದರಿಂದ ಅಂತರಜಲ ಮಟ್ಟವನ್ನು ಹೆಚ್ಚಿಸುವ ನೈಸಗರ್ಿಕ ಸಂಪನ್ಮೂಲ ನಿರ್ವಹಣಾ ಕಾಮಗಾರಿಗಳು, ಜಲ ಮತ್ತು ಭೂ-ಸಂರಕ್ಷಣಾ ಕಾಮಗಾರಿಗಳು ಮತ್ತು ನೀರು ಕೊಯ್ಲು ವಿನ್ಯಾಸದ ಕಾಮಗಾರಿಗಳನ್ನು ಹೆಚ್ಚಾಗಿ ಅನುಷ್ಠಾನಗೊಳಿಸಲು ಸೂಚಿಸಿದರು.

  ಸದರಿ ವಿಡೀಯೋ ಸಂವಾದ ಅಧ್ಯಕ್ಷತೆಯನ್ನು ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳಾದ ರಾಮಚಂದ್ರನ ಆರ್ ರವರು ವಹಿಸಿದ್ದರು, ಎಸ್.ಬಿ. ಮುಳ್ಳಳ್ಳಿ, ಉಪ ಕಾರ್ಯದಶರ್ಿಗಳು (ಅಭಿವೃದ್ಧಿ) ಹಾಗೂ ಅಥಣಿ, ರಾಮದುರ್ಗ ಹಾಗೂ ಸವದತ್ತಿ ತಾಲೂಕಿನ ಕಾರ್ಯನಿವರ್ಾಹಕ ಅಧಿಕಾರಿಗಳು, ಸಹಾಯಕ ನಿದರ್ೇಶಕರು, ಸಹಾಯಕ ನಿದರ್ೇಶಕರು (ತಾ.ಪಂ), ಸಹಾಯಕ ನಿದರ್ೇಶಕರು ಪಶು ಸಂಗೋಪನೆ ಇಲಾಖೆ ಹಾಗೂ ಸಹಾಯಕ ಕಾರ್ಯನಿವರ್ಾಹಕ ಅಭಿಯಂತರರು ಉಪಸ್ಥಿತರಿದ್ದರು.