ಗದಗ 14: ಡಿಸೆಂಬರ್ 27, 28ರಂದು 2018-19 ನೇ ಸಾಲಿನ ಗದಗ ಜಿಲ್ಲಾ ಮಟ್ಟದ ರಾಜ್ಯ ಸಕರ್ಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪಧರ್ೆಗಳನ್ನು ವ್ಯವಸ್ಥಿತವಾಗಿ ಏರ್ಪಡಿಸಬೇಕೆಂದು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಸೂಚನೆ ನೀಡಿದರು.
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕ್ರೀಡೆಗಳು ಪುರುಷರಿಗಾಗಿ 45 ವರ್ಷ ಒಳಗಿನ ಹಾಗೂ 45 ವರ್ಷ ಮೇಲ್ಪಟ್ಟವರಿಗೆ , ಮಹಿಳೆಯರಿಗಾಗಿ 40 ವರ್ಷ ಒಳಗಿನ ಹಾಗೂ 40 ವರ್ಷ ಮೇಲ್ಪಟ್ಟವರು ಎಂದು ವಿಭಾಗಿಸಲಾಗಿದೆ. ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ದಿ.27 ರಂದು ಬೆ. 11.00 ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿದೇಶಕ ಬಿ.ಬಿ. ವಿಶ್ವನಾಥ ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್.ಬಿ. ಹೊಸಮನಿ ಕನರ್ಾಟಕ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರವಿ ಗುಂಜೀಕರ್, ಕೋಶಾಧ್ಯಕ್ಷ ಆರ್.ಎಂ. ನಿಂಬಾನಾಯ್ಕರ್, ಪ್ರಧಾನ ಕಾರ್ಯದಶರ್ಿ ಕೆ.ಎಫ್. ಹಳ್ಯಾಳ, ಸಂಘದ ಪದಾಧಿಕಾರಿಗಳಾದ ಎಂ.ಎಸ್. ಕುಚಬಾಳ, ಹಾಗೂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.