ವಿಶ್ವ ಮಾನವ ದಿನಾಚರಣೆ ಹಾಗೂ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆಯ ಪೂರ್ವಭಾವಿ ಸಭೆ

Preliminary Meeting of World Human Day and Vishwakarma Amara Shilpi Jakanachari Sanskarana Day

ವಿಶ್ವ ಮಾನವ ದಿನಾಚರಣೆ ಹಾಗೂ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆಯ ಪೂರ್ವಭಾವಿ ಸಭೆ  

ಕಾರವಾರ  21;  ವಿಶ್ವ ಮಾನವ ದಿನಾಚರಣೆ ಹಾಗೂ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆಯನ್ನು ವಿಜೃಂಭಣೆಯಿಂದ ಅರ್ಥಪೂರ್ಣಾವಾಗಿ ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಅಹ್ಮದ್ ಮುಲ್ಲಾ ಹೇಳಿದರು.ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿಶ್ವ ಮಾನವ ದಿನಾಚರಣೆ ಹಾಗೂ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆಯ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  

ಪ್ರತಿ ವರ್ಷದಂತೆ ಈ ವರ್ಷ ಕೂಡ ಡಿ.29 ರಂದು ವಿಶ್ವ ಮಾನವ ದಿನಾಚರಣೆ ಹಾಗೂ ಜನವರಿ 1 ರಂದು ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬೆಳಗ್ಗೆ 10.30 ಗಂಟೆಗೆ ಆಚರಿಸಲು ನಿರ್ಧರಿಸಲಾಗಿದ್ದು, ಈ ಎರಡು ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಆಚರಿಸಲು ಎಲ್ಲ ಅಧಿಕಾರಿಗಳು ಸಕಲಸಿದ್ದತೆ ಮಾಡಿಕೊಂಡು, ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸೂಚನೆ ನೀಡಿದರು.  

ವಿಶ್ವದಲ್ಲಿ ವಿಖ್ಯಾತಿ ಪಡೆದ ರಾಷ್ಟೊಕವಿ ಕುವೆಂಪು ಹಾಗೂ ಅಮರ ಶಿಲ್ಪಿ ಜಕಣಾಚಾರಿ ಅವರ ಕುರಿತು ಸಾಹಿತಿಗಳಿಂದ ಉಪನ್ಯಾಸವನ್ನು ಆಯೋಜಿಸವಂತೆ ಸೂಚಿಸಿದ ಅವರು, ಅಮರ ಶಿಲ್ಪಿ ಜಕಣಾಚಾರಿ ದಿನಾಚರಣೆಯನ್ನು ಆಚರಿಸುವ ಮೂಲಕ ಹೊಸ ವರ್ಷವನ್ನು ಪ್ರಾರಂಭಿಸೋಣ ಎಂದರು.  

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ಎಂ ನಾಯ್ಕ ಅವರು ಕಾರ್ಯಕ್ರಮದ ರೂಪ ರೇಷಗಳ ಬಗ್ಗೆ ಮಾಹಿತಿ ನೀಡಿದರು.  

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶಿವಾನಂದ ಬಿ ನಾಯಕ, ವಿಶ್ವ ಕರ್ಮ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ರಾಘವೇಂದ್ರ ಆಚಾರ್ಯ, ವಿಶ್ವ ಕರ್ಮ ಸೇವಾ ಸಮಾಜ ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ, ಕಲಾವಿದ ಸುರೇಶ್ ನಾಯ್ಕ, ಧಾರ್ಮಿಕ ದತ್ತಿ ತಹಶೀಲ್ದಾರರು, ಸಮಾಜದ ಮುಖಂಡರು ಮತ್ತಿತರರು ಇದ್ದರು.